ಅನುರಾಗ್ ಕಶ್ಯಪ್ ವಿರುದ್ಧ ಅತ್ಯಾಚಾರ ಆರೋಪ ಹೊರಿಸಿದ್ದ ನಟಿ ಅಠಾವಳೆ ಪಕ್ಷಕ್ಕೆ ಸೇರ್ಪಡೆ

Update: 2020-10-26 11:47 GMT
Photo: ANI

ಮುಂಬೈ: ಇತ್ತೀಚೆಗೆ ಚಿತ್ರ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ಅತ್ಯಾಚಾರ ಆರೋಪ ಹೊರಿಸಿದ್ದ ನಟಿ ಪಾಯಲ್ ಘೋಷ್ ಅವರು ಕೇಂದ್ರ ಸಚಿವ ರಾಮದಾಸ್ ಅಠಾವಳೆ ನೇತೃತ್ವದ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಸೇರಿದ್ದಾರೆ. ಅಷ್ಟೇ ಅಲ್ಲ ಅವರನ್ನು ಪಕ್ಷದ  ಮಹಿಳಾ ಘಟಕದ ಉಪಾಧ್ಯಕ್ಷೆಯನ್ನಾಗಿಯೂ ನೇಮಕ ಮಾಡಲಾಗಿದೆ.

ಸೆಪ್ಟೆಂಬರ್ ತಿಂಗಳಲ್ಲಿ ಕಶ್ಯಪ್ ವಿರುದ್ಧ ಅತ್ಯಾಚಾರ ಆರೋಪ ಹೊರಿಸಿದ್ದ  ನಟಿ ನಂತರ ಮಹಾರಾಷ್ಟ್ರ ರಾಜ್ಯಪಾಲ  ಬಿ ಎಸ್ ಕೋಶ್ಯಾರಿ ಅವರನ್ನು ಭೇಟಿಯಾಗಿ ಕಶ್ಯಪ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದರು. ಈ ಸಂದರ್ಭ ಆಕೆಯ ಜತೆ ಅಠಾವಳೆ ಕೂಡ ಉಪಸ್ಥಿತರಿದ್ದರು. ಇಬ್ಬರೂ ನಂತರ ಮುಂಬೈ ಜಂಟಿ ಪೊಲೀಸ್ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ)  ವಿಶ್ವಾಸ್ ನಂಗರೆ ಪಾಟೀಲ್ ಅವರನ್ನು ಭೇಟಿಯಾಗಿ ಪಾಯಲ್‍ಗೆ ರಕ್ಷಣೆ ಒದಗಿಸುವಂತೆ ಕೋರಿದ್ದರು. ಪಾಯಲ್ ದೂರಿನ ಆಧಾರದಲ್ಲಿ ಮುಂಬೈ ಪೊಲೀಸರು ಕಶ್ಯಪ್ ವಿರುದ್ಧ  ಎಫ್‍ಐಆರ್ ದಾಖಲಿಸಿದ್ದರು. ವರ್ಸೋವಾದ ಯಾರಿ ರಸ್ತೆ ಸಮೀಪದ ಸ್ಥಳದಲ್ಲಿ ಕಶ್ಯಪ್ ತನ್ನ ಮೇಲೆ 2013ರಲ್ಲಿ ಅತ್ಯಾಚಾರ ನಡೆಸಿದ್ದರು ಎಂದು ಪಾಯಲ್ ತಮ್ಮ ದೂರಿನಲ್ಲಿ ಆರೋಪಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News