ಉಪಚುನಾವಣೆಗೆ ಆನ್‌ಲೈನ್ ಮೂಲಕ ಪ್ರಚಾರ: ಮಧ್ಯಪ್ರದೇಶ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

Update: 2020-10-26 14:31 GMT

ಹೊಸದಿಲ್ಲಿ, ಅ.26: ಕೊರೋನ ಸೋಂಕಿನ ಸಮಸ್ಯೆ ಇನ್ನೂ ಕಡಿಮೆಯಾಗದ ಹಿನ್ನೆಲೆಯಲ್ಲಿ, ರಾಜಕೀಯ ಪಕ್ಷಗಳು ಉಪಚುನಾವಣೆಯ ಪ್ರಚಾರ ಕಾರ್ಯವನ್ನು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ನಡೆಸಬೇಕೆಂಬ ಮಧ್ಯಪ್ರದೇಶ ಹೈಕೋರ್ಟ್‌ನ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. ಕೋವಿಡ್-19 ಮಾರ್ಗಸೂಚಿಯನ್ನು ಗಮನದಲ್ಲಿಟ್ಟುಕೊಂಡು, ನಿಯಮದ ಪ್ರಕಾರ ರಾಜಕೀಯ ರ್ಯಾಲಿ ನಡೆಸುವ ಬಗ್ಗೆ ಸೂಕ್ತ ನಿರ್ಧಾರಕ್ಕೆ ಬರುವಂತೆ ಸುಪ್ರೀಂಕೋರ್ಟ್ ಚುನಾವಣಾ ಆಯೋಗಕ್ಕೆ ಸೂಚಿಸಿದೆ.

ಅಕ್ಟೋಬರ್ 20ರ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ, ಮತ್ತು ವೈಯಕ್ತಿಕ ಪ್ರಚಾರ ಮತ್ತು ಸಭೆಗಳಿಗೆ ಅವಕಾಶ ನೀಡುವಂತೆ ಕೋರಿ ಚುನಾವಣಾ ಆಯೋಗ ಮತ್ತು ಮಧ್ಯಪ್ರದೇಶದ ಸಚಿವ ಪ್ರದ್ಯುಮ್ನ ಸಿಂಗ್ ತೋಮರ್ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ರಾಜ್ಯಸರಕಾರದ ಪ್ರಮಾಣಿತ ಕಾರ್ಯಾಚರಣಾ ವಿಧಾನ ಹಾಗೂ ಕೋವಿಡ್-19 ಮಾರ್ಗಸೂಚಿಯ ಅನುಸಾರವೇ ಚುನಾವಣಾ ಪ್ರಚಾರ ಸಭೆಗೆ ಅನುಮತಿ ನೀಡಲಾಗಿದ್ದು ಸಭೆಯಲ್ಲಿ 100ಕ್ಕಿಂತ ಹೆಚ್ಚು ಜನರು ಗುಂಪುಗೂಡದಂತೆ ಸೂಚಿಸಲಾಗಿದೆ ಎಂದು ಚುನಾವಣಾ ಆಯೋಗ ಸುಪ್ರೀಂಕೋರ್ಟ್‌ಗೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News