ಕೋವಿಡ್-19: ಹೊಸ ಪ್ರಕರಣಗಳಿಗಿಂತ ಗುಣಮುಖರಾಗುವವರ ಸಂಖ್ಯೆ ಹೆಚ್ಚಳ: ಸಚಿವ ಡಾ.ಸುಧಾಕರ್
Update: 2020-10-26 20:38 IST
ಬೆಂಗಳೂರು, ಅ. 26: ರಾಜ್ಯದಲ್ಲಿ ಇಂದು 3,130 ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, 8,715 ಜನ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಸೋಮವಾರ ಟ್ವೀಟ್ ಮಾಡಿರುವ ಅವರು, ಗುಣಮುಖರಾಗಿವವರ ಸಂಖ್ಯೆ ಸತತ 12ನೆ ದಿನವೂ ಗುಣಮುಖ ಹೊಂದಿರುವವರ ಸಂಖ್ಯೆ ಹೊಸ ಪ್ರಕರಣಗಳನ್ನು ಮೀರಿಸಿದೆ. ಮಾಸ್ಕ್ ಧರಿಸುವುದು, ಕೈತೊಳೆಯುವುದು, ಮತ್ತು ಭೌತಿಕ ಅಂತರ ಕಾಯ್ದುಕೊಳ್ಳುವ ಮೂಲಕ ಕೋವಿಡ್-19 ಸೋಂಕಿನ ವಿರುದ್ಧದ ನಮ್ಮ ಹೋರಾಟ ಮುಂದುವರಿಸೋಣ ಎಂದು ಕರೆ ನೀಡಿದ್ದಾರೆ.