ಸಿಎಂ ಬದಲಾವಣೆ ಬಗ್ಗೆ ಚರ್ಚೆ ನಡೆದಿಲ್ಲ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Update: 2020-10-26 15:56 GMT

ಹುಬ್ಬಳ್ಳಿ, ಅ.26: ಕರ್ನಾಟಕ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ರಾಷ್ಟ್ರೀಯ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟಪಡಿಸಿದ್ದಾರೆ. 

ಸೋಮವಾರ ಹುಬ್ಬಳ್ಳಿ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಪಕ್ಷದ ಮುಖಂಡರುಗಳಿಂದಲೇ ಮುಖ್ಯಮಂತ್ರಿ ಬದಲಾವಣೆಯ ಮಾತುಗಳು ಕೇಳಿ ಬರುತ್ತಿವೆ ಎಂಬ ಹೇಳಿಕೆಗಳನ್ನು ಕಾಂಗ್ರೆಸ್, ಜೆಡಿಎಸ್ ಪಕ್ಷದ ಮುಖಂಡರುಗಳು ನೀಡುತ್ತಿದ್ದಾರೆ. ಆದರೆ, ರಾಷ್ಟ್ರೀಯ ಮಟ್ಟದಲ್ಲಿ ಸಿಎಂ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ತಿಳಿಸಿದರು.

ಸಚಿವ ಜಗದೀಶ್ ಶೆಟ್ಟರ್ ಮಾತನಾಡಿ, ಬಿ.ಎಸ್.ಯಡಿಯೂರಪ್ಪ ಅವರೇ ಇನ್ನು ಮೂರು ವರ್ಷಗಳ ಕಾಲ ಮುಖ್ಯಮಂತ್ರಿ ಆಗಿರುತ್ತಾರೆ. ಗೊಂದಲ ಸೃಷ್ಟಿಸಲು ಇಂಥ ಹೇಳಿಕೆಗಳನ್ನು ನೀಡುತ್ತಿರುತ್ತಾರೆ. ನಮ್ಮ ಸರಕಾರ ಕೊರೋನ ಸೋಂಕು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳುತ್ತಿದೆ. ಇಂಥ ಸಂದರ್ಭದಲ್ಲಿ ಸಿಎಂ ಬದಲಾವಣೆ ಬಗ್ಗೆ ಮಾತನಾಡುವುದು ರಾಜ್ಯದ ಹಿತದೃಷ್ಟಿಯಿಂದ ಒಳ್ಳೆಯದಲ್ಲ ಎಂದು ಹೇಳಿದರು. 

ಉತ್ತರ ಕರ್ನಾಟಕದಲ್ಲಿ ಪ್ರವಾಹಕ್ಕೆ ಸಿಲುಕಿದ್ದ ಜನರನ್ನು ಈಗಾಗಲೇ ರಕ್ಷಿಸಲಾಗಿದೆ. ಮನೆ ಹಾನಿ, ಬೆಳೆ ಹಾನಿಗೆ ಪರಿಹಾರ ನೀಡಲು ಜಿಲ್ಲಾಧಿಕಾರಿಗಳಿಗೆ ಸಿಎಂ ಅವರು ಸೂಚಿಸಿದ್ದಾರೆ. ಸದ್ಯದ ಮಟ್ಟಿಗೆ ಮಳೆ ಕಡಿಮೆಯಾಗಿದೆ ಎಂದು ತಿಳಿಸಿದರು. 

ರಾಜ್ಯದ ಸಾರ್ವತ್ರಿಕ ವಿಧಾನಸಭೆ ಚುನಾವಣೆ ಬರಲು ಇನ್ನೂ ಮೂರು ವರ್ಷ ಬಾಕಿ ಇದೆ. ಆಗಲೇ ಕಾಂಗ್ರೆಸ್‍ನಲ್ಲಿ ಮುಖ್ಯಮಂತ್ರಿಯಾಗಲು ಪೈಪೋಟಿ ಶುರುವಾಗಿದೆ. ಬೆಂಬಲಿಗರ ಮೂಲಕ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಹೇಳಿಕೆ ಕೊಡಿಸುತ್ತಿದ್ದಾರೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News