ಆಸ್ಟ್ರೇಲಿಯ ಕ್ರಿಕೆಟ್ ಪ್ರವಾಸಕ್ಕೆ ಟೀಮ್ ಇಂಡಿಯಾ ಪ್ರಕಟ

Update: 2020-10-26 17:55 GMT

ಹೊಸದಿಲ್ಲಿ:  ಆಸ್ಟ್ರೇಲಿಯ ವಿರುದ್ಧದ ಟ್ವೆಂಟಿ-20, ಏಕದಿನ ಹಾಗೂ ಟೆಸ್ಟ್ ಸರಣಿಗಾಗಿ ಟೀಮ್ ಇಂಡಿಯಾವನ್ನು ಸೋಮವಾರ ಪ್ರಕಟಿಸಲಾಗಿದೆ. ಮೂರು ತಂಡಗಳನ್ನು ವಿರಾಟ್ ಕೊಹ್ಲಿ ನಾಯಕರಾಗಿ ತಂಡವನ್ನು ಮುನ್ನಡೆಸಲಿದ್ದಾರೆ.

ಗಾಯದ ಸಮಸ್ಯೆಯಿಂದಾಗಿ ಐಪಿಎಲ್ ಟೂರ್ನಿಯ ಉಳಿದ ಪಂದ್ಯಗಳಿಂದ ಹೊರಗುಳಿದಿದ್ದ ಭಾರತದ ಸೀಮಿತ ಓವರ್ ಕ್ರಿಕೆಟ್ ತಂಡದ ಉಪ ನಾಯಕ ಹಾಗೂ ಹಿರಿಯ  ಆರಂಭಿಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಅವರು ಆಸ್ಟ್ರೇಲಿಯ ವಿರುದ್ದದ ಮೂರು ಪ್ರಕಾರದ ಕ್ರಿಕೆಟ್ ಸರಣಿಗೆ ಭಾರತ ತಂಡದಲ್ಲಿ ಸ್ಥಾನ ಪಡೆದಿಲ್ಲ. ರೋಹಿತ್ ಅನುಪಸ್ಥಿತಿಯಲ್ಲಿ ಕೆ.ಎಲ್. ರಾಹುಲ್ ಅವರು ಸೀಮಿತ ಓವರ್ ಕ್ರಿಕೆಟ್ ನಲ್ಲಿ ಉಪ ನಾಯಕನಾಗಿರುತ್ತಾರೆ.

ಟೆಸ್ಟ್ ಕ್ರಿಕೆಟ್ ತಂಡದಲ್ಲಿ ಮುಹಮ್ಮದ್ ಸಿರಾಜ್ ಐದನೇ ವೇಗದ ಬೌಲರ್ ಆಗಿ ಆಯ್ಕೆಯಾಗಿದ್ದಾರೆ ಕೆಕೆಆರ್ ಸ್ಪಿನ್ನರ್ ವರುಣ್ ಚಕ್ರವರ್ತಿ ಇದೇ ಮೊದಲ ಬಾರಿ ಟ್ವೆಂಟಿ-20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಭಾರತವು ಆಸ್ಟ್ರೇಲಿಯ ಪ್ರವಾಸದಲ್ಲಿ ತಲಾ 3 ಟ್ವೆಂಟಿ-20 ಸರಣಿ ಹಾಗೂ ಏಕದಿನ ಸರಣಿಯಲ್ಲದೆ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯನ್ನೂ ಆಡಲಿದೆ. ಸರಣಿಯು ನವೆಂಬರ್ 27 ರಿಂದ ಆರಂಭವಾಗಲಿದೆ.

ಟೀಮ್ ಇಂಡಿಯಾ ಟ್ವೆಂಟಿ-20 ತಂಡ: ವಿರಾಟ್ ಕೊಹ್ಲಿ(ನಾಯಕ), ಶಿಖರ್ ಧವನ್ , ಮಾಯಾಂಕ್ ಅಗರ್ವಾಲ್, ಕೆ.ಎಲ್. ರಾಹುಲ್(ಉಪ ನಾಯಕ-ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಮನೀಷ್ ಪಾಂಡೆ, ಹಾರ್ದಿಕ್ ಪಾಂಡ್ಯ, ಸಂಜು ಸ್ಯಾಮ್ಸನ್,(ವಿಕೆಟ್ ಕೀಪರ್), ರವೀಂದ್ರ ಜಡೇಜ, ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಹಾಲ್, ಜಸ್ಪ್ರೀತ್ ಬುಮ್ರಾ, ಮುಹಮ್ಮದ್ ಶಮಿ, ನವದೀಪ್ ಸೈನಿ, ದೀಪಕ್ ಚಹಾರ್, ವರುಣ್ ಚಕ್ರವರ್ತಿ.

ಏಕದಿನ ತಂಡ:  ವಿರಾಟ್ ಕೊಹ್ಲಿ(ನಾಯಕ), ಶಿಖರ್ ಧವನ್ , ಶುಭಮನ್ ಗಿಲ್, ಮಾಯಾಂಕ್ ಅಗರ್ವಾಲ್, ಕೆ.ಎಲ್. ರಾಹುಲ್(ಉಪ ನಾಯಕ-ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಮನೀಷ್ ಪಾಂಡೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜ, , ಯಜುವೇಂದ್ರ ಚಹಾಲ್,ಕುಲದೀಪ್ ಯಾದವ್,  ಜಸ್ಪ್ರೀತ್ ಬುಮ್ರಾ, ಮುಹಮ್ಮದ್ ಶಮಿ, ನವದೀಪ್ ಸೈನಿ, ಶಾರ್ದೂಲ್ ಠಾಕೂರ್.

ಟೆಸ್ಟ್ ತಂಡ: ವಿರಾಟ್ ಕೊಹ್ಲಿ(ನಾಯಕ), ಪೃಥ್ವಿ ಶಾ, ಮಾಯಾಂಕ್ ಅಗರ್ವಾಲ್, ಕೆ.ಎಲ್. ರಾಹುಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ( ಉಪ ನಾಯಕ), ಹನುಮ ವಿಹಾರಿ, ಶುಭಮನ್ ಗಿಲ್, ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್- ಬ್ಯಾಟ್ಸ್ ಮನ್ )ರಿಷಭ್ ಪಂತ್ (ವಿಕೆಟ್ ಕೀಪರ್ ) ಜಸ್ಪ್ರೀತ್ ಬುಮ್ರಾ, ಮುಹಮ್ಮದ್ ಶಮಿ, ಉಮೇಶ್ ಯಾದವ್, ನವದೀಪ್ ಸೈನಿ, ಕುಲದೀಪ್ ಯಾದವ್, ರವೀಂದ್ರ ಜಡೇಜ, ಆರ್.ಅಶ್ವಿನ್, ಮುಹಮ್ಮದ್ ಸಿರಾಜ್.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News