ಮಾಜಿ ಸಚಿವ ಡಾ.ವೈ.ನಾಗಪ್ಪ ನಿಧನ

Update: 2020-10-27 05:30 GMT

ಹರಿಹರ, ಅ.27: ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಡಾ.ವೈ.ನಾಗಪ್ಪ (87) ಮಂಗಳವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ.  

 ಹರಿಹರ ವಿಧಾನ ಸಭಾ ಕ್ಷೇತ್ರದಲ್ಲಿ 1989, 1999 ಹಾಗೂ 2004 ಸೇರಿದಂತೆ ಒಟ್ಟು ಮೂರು ಶಾಸಕರಾಗಿ 2004ರಲ್ಲಿ  ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರಕಾರದ  ಧರ್ಮಸಿಂಗ್ ಸಚಿವ ಸಂಪುಟದಲ್ಲಿ ಸಮಾಜ ಕಲ್ಯಾಣ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. 2008 ರಲ್ಲಿ ಮತ್ತೆ ಹರಿಹರ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡರು. ನಂತರ ಬದಲಾದ ರಾಜಕೀಯದಿಂದ ಮತ್ತು ಅನಾರೋಗ್ಯದಿಂದ ರಾಜಕಾರಣದಿಂದ ತೆರೆಮರೆಗೆ ಸರಿದ ಡಾ.ನಾಗಪ್ಪ ಅವರು ಹರಿಹರ ತಾಲೂಕಿನಲ್ಲಿ ಶೋಷಿತ ಜನಾಂಗಗಳ ನಾಯಕರಾಗಿ ಧ್ವನಿಯಾಗಿದ್ದವರು.

ಮೃತರು ಒಬ್ಬ ಪುತ್ರ, ಮೂವರು ಪುತ್ರಿಯರು ಹಾಗೂ ಅಪಾರ ಅಭಿಮಾನಿ ಬಳಗವನ್ನು ಅಗಲಿದ್ದಾರೆ.

ಮೃತರ ಅಂತ್ಯ ಕ್ರಿಯೆ ಇಂದು ಸಂಜೆ 5 ಗಂಟೆಗೆ ಹರಿಹರದಲ್ಲಿ ನೆರವೇರಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News