ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿ: ಅಬ್ದುಲ್ ಸುಬಾನ್

Update: 2020-10-27 11:05 GMT

ಬೆಂಗಳೂರು, ಅ.27: ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲೂ ಪ್ರತಿಭೆಯಿರುತ್ತದೆ. ಅದನ್ನು ಗುರುತಿಸಿ, ಪ್ರೋತ್ಸಾಹಿಸುವ ಕೆಲಸವನ್ನು ಪೋಷಕರು ಹಾಗೂ ಶಿಕ್ಷಕರು ಮಾಡಬೇಕು ಎಂದು ಶಾಹೀನ್ ಫಾಲ್ಕನ್ ಸಮೂಹ ಶಿಕ್ಷಣ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಅಬ್ದುಲ್ ಸುಬಾನ್ ಕರೆ ನೀಡಿದ್ದಾರೆ.

ನಗರದ ಕ್ವೀನ್ಸ್ ರಸ್ತೆಯಲ್ಲಿರುವ ದಾರುಸ್ಸಲಾಮ್ ಕಟ್ಟಡದಲ್ಲಿರುವ ಶಾಹೀನ್ ಪಿಯು ಕಾಲೇಜಿನಲ್ಲಿ ಆಯೋಜಿಸಲಾಗಿದ್ದ 2020ನೇ ಸಾಲಿನ ನೀಟ್ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಗೌರವ ಸಮರ್ಪಣೆ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಶಿಕ್ಷಣ ಪಡೆಯಲು ಯಾವ ರೀತಿಯ ಪರಿಶ್ರಮ ಪಟ್ಟಿದ್ದಾರೆ ಎಂಬುದನ್ನು ನಾವು ಓದಿ ತಿಳಿದುಕೊಂಡಿದ್ದೇವೆ. ಆದರೆ, ಇಲ್ಲಿನ ಕೆಲವು ವಿದ್ಯಾರ್ಥಿಗಳು ಆ ಪರಿಸ್ಥಿತಿಯನ್ನು ಎದುರಿಸಿ, ಶೈಕ್ಷಣಿಕವಾಗಿ ಉತ್ತುಂಗಕ್ಕೆ ಏರಬೇಕು ಎಂಬ ಸಂಕಲ್ಪದಿಂದ ಸಾಧನೆಯನ್ನು ಮಾಡಿದ್ದಾರೆ ಎಂದವರು ಹೇಳಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಪೋಷಕರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News