ಬಿಬಿಎಂಪಿ ಮಾಜಿ ಸದಸ್ಯನ ಪತ್ನಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

Update: 2020-10-27 12:04 GMT

ಬೆಂಗಳೂರು, ಅ.27: ಬಿಬಿಎಂಪಿ ಬಸವನಪುರ ವಾರ್ಡ್ ಮಾಜಿ ಸದಸ್ಯ ಜಯಪ್ರಕಾಶ್ ಅವರ ಪತ್ನಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ.

ಮಾಜಿ ಪಾಲಿಕೆ ಸದಸ್ಯ ಜಯಪ್ರಕಾಶ್ ಪತ್ನಿ ವಿನೋದಾ ಮೃತರು ಎಂದು ತಿಳಿದುಬಂದಿದೆ.

ಮಂಗಳವಾರ ಮನೆಯ ಕೋಣೆಯಲ್ಲಿ ನೇಣು ಹಾಕಿಕೊಂಡು ವಿನೋದಾ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದ್ದು, ಅಸ್ವಸ್ಥರಾಗಿದ್ದ ವಿನೋದಾ ಅವರನ್ನು ಕೂಡಲೇ ಕುಟುಂಬಸ್ಥರು ಭಟ್ಟರಹಳ್ಳಿಯ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ದಂಪತಿಗೆ ಮೂರು ವರ್ಷದ ಮಗುವಿದ್ದು, ಕೆ.ಆರ್.ಪುರ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News