ತೊಕ್ಕೊಟ್ಟು : ಟ್ರಕ್ ಢಿಕ್ಕಿ ; ಬೈಕ್ ಸವಾರ ದಂಪತಿ ಮೃತ್ಯು

Update: 2020-10-27 14:36 GMT

ಮಂಗಳೂರು, ಅ. 27: ಚಲಿಸುತ್ತಿದ್ದ ಬೈಕ್ ಮೇಲೆ ಟ್ರಕ್ ಹರಿದು ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟು, ಗಂಭೀರ ಗಾಯಗೊಂಡ ಬೈಕ್ ಸವಾರ ಆಸ್ಪತ್ರೆಗೆ ಹೋಗುವ ದಾರಿ ಮಧ್ಯೆ ಮೃತಪಟ್ಟ ಘಟನೆ ತೊಕ್ಕೊಟ್ಟು ಓವರ್ ಬ್ರಿಡ್ಜ್ ಸಮೀಪ ಮಂಗಳವಾರ ಸಂಜೆ ನಡೆದಿದೆ.

ಬೈಕ್ ನಲ್ಲಿದ್ದ ದಂಪತಿ ಮೇಲೆ ಟ್ರಕ್ ಹರಿದ ಪರಿಣಾಮ ಪ್ರಿಯಾ ಫೆರ್ನಾಂಡಿಸ್ (25) ಅವರು ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಸವಾರ ಅವರ ಪತಿ ರಾಯನ್ ಫೆರ್ನಾಂಡಿಸ್ (34)ಆಸ್ಪತ್ರೆಗೆ ಕೊಂಡು ಹೋಗುವ ದಾರಿಯಲ್ಲಿ ಮೃತಪಟ್ಟರು ಎಂದು ತಿಳಿದುಬಂದಿದೆ.

ಮಂಗಳೂರು ಬಜಾಲ್ ಮೂಲದ ರಾಯನ್ ಫೆರ್ನಾಂಡಿಸ್ ಅವರು ಕಳೆದ ಹತ್ತು ದಿನಗಳಿಂದ ಉಳ್ಳಾಲ ಮಾಸ್ತಿಕಟ್ಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ದಂಪತಿಗಳಿಬ್ಬರೂ ಕಂಕನಾಡಿ ಫಾದರ್ ಮುಲ್ಲರ್ಸ್ ಆಸ್ಪತ್ರೆ ಸಿಬ್ಬಂದಿ ಎಂದು ತಿಳಿದುಬಂದಿದೆ.

ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News