ದ.ಕ.ಜಿಲ್ಲೆ : 122 ಮಂದಿಗೆ ಕೊರೋನ ಸೋಂಕು, ಕೋವಿಡ್‌ಗೆ ಓರ್ವ ಬಲಿ

Update: 2020-10-27 15:23 GMT

ಮಂಗಳೂರು, ಅ. 27: ದ.ಕ. ಜಿಲ್ಲೆಯಲ್ಲಿ ಕೊರೋನ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡುಬಂದಿದೆ. ಮಂಗಳವಾರ 122 ಮಂದಿಯಲ್ಲಿ ಕೋವಿಡ್ ದೃಢಪಟ್ಟಿದ್ದರೆ, ಕೊರೋನದಿಂದ ಓರ್ವ ಮೃತಪಟ್ಟಿದ್ದಾರೆ. 260 ಮಂದಿ ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿನ 29,815 ಸೋಂಕಿತರ ಪೈಕಿ 26,858 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 668ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 2,289 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

9,871 ಕೇಸು ಪತ್ತೆ: ದ.ಕ. ಜಿಲ್ಲೆಯಲ್ಲಿ ಸರಕಾರದ ಮಾರ್ಗಸೂಚಿ ಉಲ್ಲಂಘಿಸಿ ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದೇ ಇದ್ದ 9,871 ಪ್ರಕರಣಗಳು ಪತ್ತೆಯಾಗಿವೆ. ಇವರಿಂದ 11,11,285 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News