ಸರಳಾ ರಂಗನಾಥರಾವ್ ಪ್ರಶಸ್ತಿಗೆ ಶೋಭಾ ಹಿರೇಕೈ ಆಯ್ಕೆ

Update: 2020-10-27 17:10 GMT

ಬೆಂಗಳೂರು, ಅ.27: 2019ನೇ ಸಾಲಿನ ಸರಳಾ ರಂಗನಾಥರಾವ್ ಪ್ರಶಸ್ತಿಗೆ ಕವಿಯತ್ರಿ ಶೋಭಾ ಹಿರೇಕೈ ಕೊಂಡ್ರಾಜಿ ಆಯ್ಕೆಯಾಗಿದ್ದಾರೆ.

ಸರಳಾ ರಂಗನಾಥ ರಾವ್ ಪ್ರತಿಷ್ಠಾನ ಕೊಡಮಾಡುವ ಈ ಪ್ರಶಸ್ತಿಯನ್ನು ಲೇಖಕಿಯರ ಚೊಚ್ಚಲ ಕೃತಿಗೆ ಕೊಡಲಾಗುತ್ತಿದ್ದು, ಕವಯತ್ರಿ ಶೋಭಾ ಹಿರೇಕೈರವರ ಅವ್ವ ಮತ್ತು ಅಬ್ಬಲಿಗೆ ಕೃತಿ ಆಯ್ಕೆಯಾಗಿದೆ. ಹಿರಿಯ ಕವಿಗಳಾದ ಡಾ.ಎಚ್.ಎಸ್.ವೆಂಕಟೇಶಮೂರ್ತಿ, ಚಿಂತಾಮಣಿ ಕೊಡ್ಲೇಕೆರೆ ಮತ್ತು ಹಿರಿಯ ಪತ್ರಕರ್ತ ಜಿ.ಎನ್.ರಂಗನಾಥ ರಾವ್ ತೀರ್ಪುಗಾರರಾಗಿದ್ದರು.

ಉತ್ತರ ಕನ್ನಡ ಜಿಲ್ಲೆ ಶಿರಸಿ ಮೂಲಕ ಶೋಭಾ ಹಿರೇಕೈ ಕೊಂಡ್ರಾಜಿ ಅವರು, ಸಿದ್ದಾಪುರ ತಾಲೂಕಿನಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2021ರ ಜನವರಿಯಲ್ಲಿ ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಇವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಪ್ರತಿಷ್ಠಾನ ಪ್ರಕಟನೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News