ವಿಧಾನ ಪರಿಷತ್ ಚುನಾವಣೆ: ಸಾಂದರ್ಭಿಕ ರಜೆ ಮಂಜೂರು ಮಾಡಲು ಸೂಚನೆ

Update: 2020-10-27 18:15 GMT

ಬೆಂಗಳೂರು, ಅ. 27: ವಿಧಾನ ಪರಿಷತ್ತಿನ ನಾಲ್ಕೂ ಕ್ಷೇತ್ರಗಳ ಚುನಾವಣೆ ಹಿನ್ನೆಲೆಯಲ್ಲಿ ಮತ ಕ್ಷೇತ್ರಗಳಲ್ಲಿನ ಸರಕಾರಿ ಹಾಗೂ ಖಾಸಗಿ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾ ಸಂಸ್ಥೆಗಳು, ಎಲ್ಲ ಶೈಕ್ಷಣಿಕ ಸಂಸ್ಥೆಗಳು ಕೇಂದ್ರ ಸರಕಾರಿ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರೆ ಬ್ಯಾಂಕುಗಳು ಸೇರಿದಂತೆ ಇನ್ನಿತರ ಸಂಸ್ಥೆಗಳ ಎಲ್ಲ ಪದವೀಧರರು, ಶಿಕ್ಷಕರು ಮತದಾನಕ್ಕೆ ಅನುಕೂಲ ಆಗುವಂತೆ ಅ.28ರಂದು ವಿಶೇಷ ಸಾಂದರ್ಭಿಕ ರಜೆ ಘೋಷಣೆ ಮಾಡಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶಿಸಿದೆ.

ಕ್ಷೇತ್ರಗಳು: ಆಗ್ನೇಯ ಪದವೀಧರರ ಕ್ಷೇತ್ರ-ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ದಾವಣಗೆರೆ ಜಿಲ್ಲೆ.

ಪಶ್ಚಿಮ ಪದವೀಧರರ ಕ್ಷೇತ್ರ: ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳು.

ಈಶಾನ್ಯ ಶಿಕ್ಷಕರ ಕ್ಷೇತ್ರ: ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳು.

ಬೆಂಗಳೂರು ಶಿಕ್ಷಕರ ಕ್ಷೇತ್ರ: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಮತ ಚಲಾಯಿಸಲು ಅನುಕೂಲ ಆಗುವಂತೆ ರಜೆ ನೀಡಬೇಕು ಎಂದು ಸೂಚನೆ ನೀಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News