ಮಂಗಳೂರು ಏರ್‌ಪೋರ್ಟ್‌ನಲ್ಲಿ 32.96 ಲಕ್ಷ ರೂ. ಮೌಲ್ಯದ ಚಿನ್ನ ವಶ, ಓರ್ವ ಸೆರೆ

Update: 2020-10-28 04:48 GMT

ಮಂಗಳೂರು : ದುಬೈನಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕನಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಮಂಗಳೂರಿನ ಅಬೂಬಕರ್ ಸಿದ್ದೀಕ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಈತ ದುಬೈನಿಂದ ಸ್ಪೈಸ್‌ಜೆಟ್ ವಿಮಾನದಲ್ಲಿ ಮಂಗಳೂರಿಗೆ ಬಂದಿಳಿದಿದ್ದಾನೆ. ತಪಾಸಣೆ ನಡೆಸುವ ವೇಳೆ 24 ಕ್ಯಾರೆಟ್‌ನ  634 ಗ್ರಾಂ ಚಿನ್ನ ಪತ್ತೆಯಾಗಿದೆ. ಇದರ ಮೌಲ್ಯ 32,96,800 ರೂ. ಎಂದು ಅಂದಾಜಿಸಲಾಗಿದೆ.

ಆರೋಪಿಯು ಪೌಡರ್ ರೂಪದ ಚಿನ್ನವನ್ನು ದೇಹಕ್ಕೆ ಅಂಟಿಸಿಕೊಂಡು ಅಕ್ರಮ ಸಾಗಾಟಕ್ಕೆ‌ ಮುಂದಾಗಿದ್ದ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News