ಉಡುಪಿ : ಮಣೆಗಾರ್ ಮೀರಾನ್ ಸಾಹೇಬ್ ಗೆ ರಾಜ್ಯೋತ್ಸವ ಪ್ರಶಸ್ತಿ

Update: 2020-10-28 08:19 GMT

ಉಡುಪಿ : ಸಾಮಾಜಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಅನಿವಾಸಿ ಉದ್ಯಮಿ ಮಣೆಗಾರ್ ಮೀರಾನ್ ಸಾಹೇಬ್ ಶಿರೂರು ಅವರು 2020ನೆ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ಶಿರೂರಿನ ಅಭಿಮೃದ್ಧಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಮತ್ತು ಅಪಾರ ಕೊಡುಗೆ ನೀಡಿರುವ ಅನಿವಾಸಿ ಉದ್ಯಮಿ ಮಣೆಗಾರ್ ಮೀರಾನ್ ಸಾಹೇಬ್ ಅವರು ಕಳೆದ 40 ವರ್ಷಗಳಿಂದ ಗಲ್ಫ್ ರಾಷ್ಟ್ರಗಳಲ್ಲಿ ಕನ್ನಡದ ನಾಡು ನುಡಿಯ ಸೇವೆ ಸಲ್ಲಿಸಿದ್ದಾರೆ.

ಅವರು ಶಿಕ್ಷಣ, ಸಾಮಾಜಿಕ, ಸಾಂಸ್ಕೃತಿಕ ಸೇರಿದಂತೆ ಹೊರನಾಡಿನಲ್ಲೂ ಕನ್ನಡಿಗರ ಸಂಘಟನೆ ಮತ್ತು ಕನ್ನಡದ ಅಭಿವೃದ್ಧಿಗಾಗಿ ವಿವಿಧ ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

'ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್, ಶಿರೂರು ಅಸೋಸಿಯೇಶನ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ಮೀರಾನ್ ಸಾಹೇಬ್ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ವಿದೇಶದಲ್ಲಿ ಮಾತ್ರವಲ್ಲದೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಜನಪರ ಕಾಳಜಿಯ ಕಾರ್ಯಕ್ರಮಗಳನ್ನು ಸಂಘಟಿಸುವ ಜೊತೆಗೆ ನೂರಾರು ಬಡ ಕುಟುಂಬಗಳಿಗೆ ಅವರು ನೆರವಾಗಿದ್ದಾರೆ.

ಇದೇ ಮೊದಲ ಬಾರಿಗೆ ಶಿರೂರಿನ ವ್ಯಕ್ತಿಯೊಬ್ಬರು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಅವರು ಶಿರೂರು ಗ್ರೀನ್ ವ್ಯಾಲಿ ನ್ಯಾಷನಲ್ ಸ್ಕೂಲ್ ಮತ್ತು ಪಿಯು ಕಾಲೇಜಿನ ಉಪಾಧ್ಯಕ್ಷರಾಗಿದ್ದು, ಮ್ಯಾನೇಜಿಂಗ್ ಟ್ರಸ್ಟಿಯಾಗಿದ್ದಾರೆ. ಶಿರೂರಿನ ಅಭಿವೃದ್ಧಿಗೆ ಅಂಬ್ಯುಲೆನ್ಸ್, ಕಸ ವಿಲೇವಾರಿ ವಾಹನ ಸೇರಿದಂತೆ ಹಲವು ಕೊಡುಗೆಗಳನ್ನು ನೀಡಿದ್ದಾರೆ.   

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News