ಸಿಎಂ ಅಭ್ಯರ್ಥಿ ಆಯ್ಕೆ ವರಿಷ್ಠರಿಗೆ ಬಿಟ್ಟ ವಿಚಾರ: ಮಾಜಿ ಸಚಿವ ಎಚ್.ಕೆ ಪಾಟೀಲ್

Update: 2020-10-28 11:41 GMT

ಗದಗ, ಅ.28: ನಮ್ಮ ಪಕ್ಷದಲ್ಲಿ ವರಿಷ್ಠರ ತೀರ್ಮಾನದಂತೆ ಸಿಎಂ ಅಭ್ಯರ್ಥಿ ಆಯ್ಕೆ ಮಾಡಲಾಗುತ್ತದೆ ಎಂದು ಮಾಜಿ ಸಚಿವ ಎಚ್.ಕೆ.ಪಾಟೀಲ್ ಹೇಳಿದ್ದಾರೆ.

ಬುಧವಾರ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆ ಮತದಾನ ಮಾಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ವರಿಷ್ಠರ ತೀರ್ಮಾನದಂತೆ ಸಿಎಂ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ. ಇದು ನಮ್ಮ ಪಕ್ಷದ ಸಿದ್ಧಾಂತ ಎಂದು ಹೇಳಿದರು.

ನಾಲ್ಕು ಚುನಾವಣಾ ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರದಲ್ಲಿ ನಾನು ಪ್ರಚಾರ ಮಾಡಿದ್ದೇನೆ, ಶಿರಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯಚಂದ್ರ ಅವರು ಈ ಹಿಂದೆ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ.

ಈ ಬಾರಿ ಜಯಚಂದ್ರ ಅವರ ಆಯ್ಕೆ ಬಹಳ ಸುಲಭ ಇದೆ. ಪಶ್ಚಿಮ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆರ್.ಎಂ. ಕುಬೇರಪ್ಪ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News