ಸಾಲಿಗ್ರಾಮ ಪ.ಪಂ: ನ.2ರಂದು ಚುನಾವಣೆ

Update: 2020-10-28 15:32 GMT

ಉಡುಪಿ, ಅ.28: ಸಾಲಿಗ್ರಾಮ ಪಟ್ಟಣ ಪಂಚಾಯತ್‌ನ ಅಧ್ಯಕ್ಷ ಸ್ಥಾನವನ್ನು ಹಿಂದುಳಿದ ಬಿ ವರ್ಗದ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನವನ್ನು ಸಾಮಾನ್ಯ ವರ್ಗ ಮಹಿಳೆಗೆ ಮೀಸಲಿರಿಸಲಾಗಿದ್ದು, ಅಭ್ಯರ್ಥಿಗಳ ಆಯ್ಕೆಗಾಗಿ ನವೆಂಬರ್ 2ರಂದು ಅಪರಾಹ್ನ 2:00ಕ್ಕೆ ಸಾಲಿಗ್ರಾಮ ಪಟ್ಟಣ ಪಂಚಾಯತ್ ಕಚೇರಿಯಲ್ಲಿ ಸಭೆ ನಡೆಯಲಿದೆ.

ಆಸಕ್ತರು ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರವನ್ನು ನ.2ರ ಬೆಳಗ್ಗೆ 10ರಿಂದ 12 ಗಂಟೆಯವರೆಗೆ ಸಾಲಿಗ್ರಾಮ ಪಟ್ಟಣ ಪಂಚಾಯತ್ ಕಚೇರಿಯಲ್ಲಿ ಚುನಾವಣಾಧಿಕಾರಿಗೆ ಸಲ್ಲಿಸಬಹುದು. ನಾಮಪತ್ರಗಳ ಪರಿಶೀಲನೆ ಸಭೆಯ ಪ್ರಾರಂಭದಲ್ಲಿ ನಡೆಯಲಿದ್ದು, ಉಮೇ ದುದಾರಿಕೆಯನ್ನು ಹಿಂದೆಗೆದುಕೊಳ್ಳಲು ಅಪೇಕ್ಷಿಸುವವರು ಅಪರಾಹ್ನ 2:15ರೊಳಗೆ ಚುನಾವಣಾಧಿಕಾರಿಗೆ ಅರ್ಜಿ ಸಲ್ಲಿಸಬಹುದು ಎಂದು ಬ್ರಹ್ಮಾವರ ತಾಲೂಕು ತಹಶೀಲ್ದಾರರ ಪ್ರಕಟಣೆ ತಿಳಿಸಿದೆ.

ನಾಮಪತ್ರಗಳ ಪರಿಶೀಲನೆ ಸೆಯಪ್ರಾರಂದಲ್ಲಿ ನಡೆಯಲಿದ್ದು, ಉಮೇದುದಾರಿಕೆಯನ್ನು ಹಿಂದೆಗೆದುಕೊಳ್ಳಲು ಅಪೇಕ್ಷಿಸುವವರು ಅಪರಾಹ್ನ 2:15ರೊಳಗೆ ಚುನಾವಣಾಧಿಕಾರಿಗೆ ಅರ್ಜಿ ಸಲ್ಲಿಸಬಹುದು ಎಂದು ಬ್ರಹ್ಮಾವರ ತಾಲೂಕು ತಹಶೀಲ್ದಾರರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News