×
Ad

ನ. 2ರವರೆಗೆ ಭ್ರಷ್ಟಾಚಾರ ವಿರುದ್ಧ ಜಾಗೃತಿ ಸಪ್ತಾಹ

Update: 2020-10-28 21:13 IST

ಮಂಗಳೂರು, ಅ.28: ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸಲು ಅ.27ರಿಂದ ನ.2ರವರೆಗೆ ರಾಜ್ಯ ಸೇರಿದಂತೆ ರಾಷ್ಟ್ರದಾದ್ಯಾಂತ ‘ಜಾಗೃತ ಭಾರತ-ಸಮೃದ್ಧ ಭಾರತ’ ಶೀರ್ಷಿಕೆಯಡಿ ಜಾಗೃತಿ ಅರಿವು ಸಪ್ತಾಹ ನಡೆಯಲಿದೆ.

ಜಿಲ್ಲೆಯ ಯಾವುದೇ ಸರಕಾರಿ ಅಧಿಕಾರಿಗಳಿಂದ ಸಾರ್ವಜನಿಕರಿಗೆ ಆಗಬೇಕಾದ ಕೆಲಸದಲ್ಲಿ ವಿಳಂಬವಾಗಿದ್ದರೆ ಅಥವಾ ಅಧಿಕಾರಿಗಳು ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ತೊಂದರೆ ಕೊಡುವುದು ಅಥವಾ ಇನ್ಯಾವುದೇ ತರಹದ ದುರಾಡಳಿತದಲ್ಲಿ ತೊಡಗಿದ್ದರೆ, ಅದರಿಂದ ತೊಂದರೆಗೊಳಗಾದ ಸಾರ್ವಜನಿಕರು ತಮ್ಮ ಅಹವಾಲನ್ನು ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ದೂರು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪೊಲೀಸ್ ಪೊಲೀಸ್ ಅಧೀಕ್ಷಕರು (ಪ್ರಭಾರ) ಭಾಸ್ಕರ್ ವಿ.ಬಿ. (0824-2950997, 9945900778), ಪುತ್ತೂರು, ಸುಳ್ಯ ಹಾಗೂ ಕಡಬ ತಾಲೂಕಿನ ಪೊಲೀಸ್ ಉಪಾಧೀಕ್ಷಕರು-1 ಎಸ್.ವಿಜಯ ಪ್ರಸಾದ್ (0824-2453420), ಮಂಗಳೂರು, ಮೂಡುಬಿದಿರೆ, ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕಿನ ಪೊಲೀಸ್ ಉಪಾಧೀಕ್ಷಕರು-2 ಕಲಾವತಿ ಕೆ. (7026994128), ಮಂಗಳೂರು ಹಾಗೂ ಮೂಡುಬಿದಿರೆ ತಾಲೂಕು ಪೊಲೀಸ್ ನಿರೀಕ್ಷಕರು-1 ಭಾರತಿ ಜಿ. (9449044377), ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕು ಪೊಲೀಸ್ ನಿರೀಕ್ಷಕರು-2 ಅಮಾನುಲ್ಲಾ (9448461816) ಅವರನ್ನು ಸಂಪರ್ಕಿಸಲು ಮಂಗಳೂರು ಲೋಕಾಯುಕ್ತದ ಪೊಲೀಸ್ ಉಪಾಧೀಕ್ಷಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News