ಪತ್ರಕರ್ತರ 35ನೇ ರಾಜ್ಯ ಸಮ್ಮೇಳನದ ಸ್ಮರಣ ಸಂಚಿಕೆ ಬಿಡುಗಡೆ

Update: 2020-10-29 10:27 GMT

ಮಂಗಳೂರು, ಅ. 29: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘವು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಮಾ.7-8 ರಂದು ಮಂಗಳೂರಿನಲ್ಲಿ ಆಯೋಜಿಸಿದ 35ನೇ ರಾಜ್ಯ ಸಮ್ಮೇಳನದ ಸ್ಮರಣ ಸಂಚಿಕೆಯನ್ನು ಗುರುವಾರ ಪತ್ರಿಕಾ ಭವನದಲ್ಲಿ ಬಿಡುಗಡೆಗೊಳಿಸಲಾಯಿತು.

ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಿದರು. ಸಮ್ಮೇಳನ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದೆ. ಸ್ಮರಣ ಸಂಚಿಕೆ ಉತ್ತಮವಾಗಿ ಮೂಡಿ ಬಂದಿದ್ದು, ಇದರ ಯಶಸ್ಸಿಗೆ ಶ್ರಮಿಸಿದ ಪದಾಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದರು.

ರೆಡ್‌ಕ್ರಾಸ್ ಮಂಗಳೂರು ಶಾಖೆಯ ಗೌರವ ಕಾರ್ಯದರ್ಶಿ ಪ್ರಭಾಕರ ಶರ್ಮ ಮುಖ್ಯ ಅತಿಥಿಯಾಗಿದ್ದರು. ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಆನಂದ ಶೆಟ್ಟಿ, ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ ಉಪಸ್ಥಿತರಿದ್ದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸ್ವಾಗತಿಸಿದರು. ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಕಾರ್ಯಕಾರಿ ಸಮಿತಿ ಸದಸ್ಯ ರವಿಚಂದ್ರ ಭಟ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News