ಕೊಲ್ಲೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಆಯ್ಕೆ

Update: 2020-10-29 12:26 GMT

ಉಡುಪಿ, ಅ.29: ಬೈಂದೂರು ತಾಲೂಕು ಕೊಲ್ಲೂರು ಶ್ರೀಮುಕಾಂಬಿಕಾ ದೇವಸ್ಥಾನಕ್ಕೆ ನೂತನ ವ್ಯವಸ್ಥಾಪನಾ ಸಮಿತಿಗೆ ಒಟ್ಟು ಒಂಭತ್ತು ಮಂದಿ ಸದಸ್ಯರನ್ನು ಮೂರು ವರ್ಷಗಳ ಅವಧಿಗೆ ಆಯ್ಕೆ ಮಾಡಲಾಗಿದೆ.

ರಾಜ್ಯ ಧಾರ್ಮಿಕ ಪರಿಷತ್ತಿನ ಸದಸ್ಯ ಕಾರ್ಯದರ್ಶಿ ಹಾಗೂ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಆಯುಕ್ತರು ಹೊರಡಿಸಿದ ಆದೇಶದಲ್ಲಿ ನೂತನ ವ್ಯವಸ್ಥಾಪನಾ ಸಮಿತಿಗೆ ಆಯ್ಕೆಯಾದ ಸದಸ್ಯರ ವಿವರ ಹೀಗಿದೆ.

ಪಾಳಿಯಲ್ಲಿರುವ ಪ್ರಧಾನ ಅರ್ಚಕ ಕೊಲ್ಲೂರು ಬಾಳೆಗದ್ದೆ ಮನೆ ಡಾ. ಕೆ. ರಾಮಚಂದ್ರ ಅಡಿಗ, ಮಹಿಳಾ ಮೀಸಲಾತಿಯಲ್ಲಿ ಕೊಲ್ಲೂರಿನ ರತ್ನಾ ರಮೇಶ್ ಕುಂದರ್, ಸಂಧ್ಯಾ ರಮೇಶ್ ಮಚ್ಚಟ್ಟು, ಪರಿಶಿಷ್ಟ ಜಾತಿ ಮೀಸಲಾತಿಯಲ್ಲಿ ಸೇನಾಪುರ ರಾಮನಗರದ ಗೋಪಾಲಕೃಷ್ಣ, ಸಾಮಾನ್ಯ ವರ್ಗದಿಂದ ಕೆರಾಡಿಯ ಚಂದ್ರಶೇಖರ ಶೆಟ್ಟಿ, ಗಣೇಶ್ ಕಿಣಿ ಬೆಳ್ವೆ, ಚಿತ್ತೂರಿನ ಡಾ.ಅತುಲ್ ಕುಮಾರ್ ಶೆಟ್ಟಿ, ಬೈಂದೂರು ಯಡ್ತರೆಯ ಜಯಾನಂದ ಹೋಬಳಿದಾರ ಹಾಗೂ ಉಡುಪಿ ಾಲೂಕು ಕಾರ್ಕಡದ ಶೇಖರ ಪೂಜಾರಿ.

ಈ ಬಾರಿಯ ಸಮಿತಿಯ ಆಯ್ಕೆ ಪರಿಗಣನೆಗೆ ಒಟ್ಟು 158 ಅರ್ಜಿಗಳು ಸಲ್ಲಿಸಲ್ಪಟ್ಟಿದ್ದವು ಎಂದು ತಿಳಿದುಬಂದಿದೆ. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅವಧಿ ಮೂರು ವರ್ಷಗಳದ್ದು, ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ವ್ಯವಸ್ಥಾಪನ ಸಮಿತಿಯ ಪದ ನಿಮಿತ್ತ ಕಾರ್ಯದರ್ಶಿಯಾಗಿರುತ್ತಾರೆ. ನೂತನ ಸದಸ್ಯರು ತಮ್ಮಲ್ಲೇ ಒಬ್ಬರನ್ನು ವ್ಯವಸ್ಥಾಪನ ಸಮಿತಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಬೇಕಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News