ಉಪಚುನಾವಣೆ ಫಲಿತಾಂಶ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಲಿದೆ: ಝಮೀರ್ ಅಹ್ಮದ್

Update: 2020-10-29 12:26 GMT

ಬೆಂಗಳೂರು, ಅ.29: ಮತ್ತೆ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಬರಲಿದೆ ಎಂದು ಮಾಜಿ ಸಚಿವ ಝಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.

ಈ ಕುರಿತಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಶಿರಾ ಹಾಗೂ ರಾಜರಾಜೇಶ್ವರಿ ನಗರ ವಿಧಾನ ಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದೆ. ಈ ಉಪ ಚುನಾವಣೆಯ ಫಲಿತಾಂಶ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಲಿದ್ದು, ಮತ್ತೆ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರಕಾರ ಬಿದ್ದು ಹೋಗಲಿದೆ ಎಂದಿದ್ದಾರೆ.

ಈಗಿನ ರಾಜಕೀಯ ಬೆಳವಣಿಗೆ ನೋಡಿದರೆ ಬಿಜೆಪಿಯಲ್ಲಿ ರಾಜಕೀಯ ವಿದ್ಯಮಾನಗಳು ಗರಿ ಗೆದರಿವೆ. ಬಿಜೆಪಿಯಲ್ಲಿ ಆಗುತ್ತಿರುವ ಬದಲಾವಣೆ ಗಮನಿಸಿದರೆ ಬಿಜೆಪಿ ಸರಕಾರ ಯಾವ ಹೊತ್ತಿನಲ್ಲಿಯಾದರೂ ಬಿದ್ದೋಗಿ, ಮತ್ತೆ ಚುನಾವಣೆ ಬರುವ ಸಾಧ್ಯತೆ ಇದೆ ಎಂಬ ಸುಳಿವು ನೀಡಿದ್ದಾರೆ.

ಉಪ ಚುನಾವಣೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆ ಆಗಲಿದೆ. ಉಪ ಚುನಾವಣೆಯ ಫಲಿತಾಂಶದ ಬಳಿಕ ಬೈ ಎಲೆಕ್ಷನ್ ಬರಬಹುದು. ರಾಜ್ಯದಲ್ಲಿ ಉಪ ಚುನಾವಣೆ ಫಲಿತಾಂಶ ರಾಜ್ಯ ಬಿಜೆಪಿ ನೇತೃತ್ವದ ಸರಕಾರದಲ್ಲಿ ಮಹತ್ವದ ಬದಲಾವಣೆ ಕೂಡ ತರಬಹುದು ಎಂದು ಭವಿಷ್ಯ ನುಡಿದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News