ರಾಜ್ಯದಲ್ಲಿ ನ.2ರವರೆಗೆ ಭಾರೀ ಮಳೆ ಸಾಧ್ಯತೆ

Update: 2020-10-29 14:22 GMT

ಬೆಂಗಳೂರು, ಅ.29: ಈಶಾನ್ಯ ಮಾರುತಗಳು ದಕ್ಷಿಣ ಭಾರತವನ್ನು ಬುಧವಾರ ಪ್ರವೇಶಿಸಿದ್ದು, ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ನ.2 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್.ಪಾಟೀಲ್ ಹೇಳಿದ್ದಾರೆ.

ಅ.31, ನ.1 ಮತ್ತು 2ರಂದು ರಾಜ್ಯದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಕರಾವಳಿ ಭಾಗ, ಬೆಳಗಾವಿ, ಗದಗ, ವಿಜಯಪುರ, ರಾಯಚೂರು, ಹಾವೇರಿ, ಸೇರಿದಂತೆ ಹಲವೆಡೆ ಹಚ್ಚಿನ ಪ್ರಮಾಣದ ಮಳೆಯಾಗಲಿದೆ. ಅ.30ರಿಂದ ನ.2 ರವರೆಗೆ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದ್ದಾರೆ.

ಪ್ರತಿ ವರ್ಷದಂತೆ ಈ ಬಾರಿಯೂ ಸಾಧಾರಣ ಚಳಿ ಇರಲಿದೆ. ರಾಜ್ಯದಲ್ಲಿ ಚಳಿಗಾಲದ ಕನಿಷ್ಠ ಉಷ್ಣಾಂಶ ಕಳೆದ ಬಾರಿಯಂತೆಯೇ ಇರಲಿದ್ದು, ಕೆಲವು ಕಡೆ ಹೆಚ್ಚಿನ ಚಳಿ ಇರಲಿದೆ. ಬೆಂಗಳೂರಿನಲ್ಲಿ 12 ರಿಂದ 14 ಡಿಗ್ರಿ ಉಷ್ಣಾಂಶ ಇರಲಿದೆ. ಕನಿಷ್ಠ ಉಷ್ಣಾಂಶ ಸ್ಥಳದಿಂದ ಸ್ಥಳಕ್ಕೆ ಬದಲಾವಣೆ ಆಗಲಿದೆ ಎಂದು ಮಾಹಿತಿ ನೀಡಿದ್ದಾರೆ.

ಬೀದರ್, ಕಲಬುರಗಿ, ವಿಜಯಪುರದಲ್ಲಿ ಕನಿಷ್ಠ ತಾಪಮಾನ 10 ಡಿಗ್ರಿಗಿಂತ ಕಡಿಮೆ ಆಗಲಿದೆ. ಜೊತೆಗೆ ಬಾಗಲಕೋಟೆ, ರಾಯಚೂರು ಗದಗ ಸೇರಿದಂತೆ ಉತ್ತರ ಒಳನಾಡಿನಲ್ಲಿ ಚಳಿಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News