ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ
Update: 2020-10-29 22:32 IST
ಮಂಗಳೂರು, ಅ. 29: ಕಾವೂರು ಸಮೀಪದ ವೃದ್ಧೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.
ಮೂಡುಶೆಡ್ಡೆ ಎದುರುಪದವು ನಿವಾಸಿ ರತ್ನಾ (64) ಆತ್ಮಹತ್ಯೆಗೈದ ವೃದ್ಧೆ ಎಂದು ತಿಳಿದುಬಂದಿದೆ.
ಸುಮಾರು 15 ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆಯು ಗುರುವಾರ ಬೆಳಗ್ಗೆ ತಮ್ಮ ಮನೆಯ ಅಂಗಳದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪುತ್ರ ದೂರಿನಲ್ಲಿ ತಿಳಿಸಿದ್ದಾರೆ.
ಈ ಕುರಿತು ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.