ದೇಶದಲ್ಲಿ ಕಳೆದ ಆರು ವಾರಗಳಲ್ಲಿ ದಿನಕ್ಕೆ ಸರಾಸರಿ 11 ಲಕ್ಷ ಕೋವಿಡ್ ಪರೀಕ್ಷೆಗಳು

Update: 2020-10-29 17:37 GMT

 ಹೊಸದಿಲ್ಲಿ,ಅ.29: ಕಳೆದ ಆರು ವಾರಗಳಲ್ಲಿ ಪ್ರತಿದಿನ ಸರಾಸರಿ ಸುಮಾರು 11 ಲಕ್ಷ ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಇದರೊಂದಿಗೆ ಒಟ್ಟು ಪರೀಕ್ಷೆಗಳ ಸಂಖ್ಯೆ 10.65 ಕೋಟಿಯನ್ನು ದಾಟಿದೆ. ಈಗ ಪ್ರತಿದಿನ 15 ಲಕ್ಷ ಪರೀಕ್ಷೆಗಳನ್ನು ನಡೆಸಬಹುದಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಗುರುವಾರ ಹೇಳಿಕೆಯೊಂದರಲ್ಲಿ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ 10,75,760 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ ಮತ್ತು ಇದರೊಂದಿಗೆ ಈವರೆಗಿನ ಒಟ್ಟು ಪರೀಕ್ಷೆಗಳ ಸಂಖ್ಯೆ 10,65,63,440ಕ್ಕೆ ತಲುಪಿದೆ ಎಂದು ಅದು ಹೇಳಿದೆ.

ಕೇರಳದಲ್ಲಿ ದಿನವೊಂದಕ್ಕೆ 8,000ಕ್ಕೂ ಅಧಿಕ ಸೋಂಕುಗಳು ವರದಿಯಾಗುತ್ತಿದ್ದು,ಅತ್ಯಧಿಕ ಸಂಖ್ಯೆಯಲ್ಲಿ ಹೊಸ ಪ್ರಕರಣಗಳು ದಾಖಲಾಗುತ್ತಿರುವ ರಾಜ್ಯವಾಗಿ ಮುಂದುವರಿದಿದೆ. 6,000ಕ್ಕೂ ಅಧಿಕ ಪ್ರಕರಣಗಳೊಂದಿಗೆ ಮಹಾರಾಷ್ಟ್ರ ನಂತರದ ಸ್ಥಾನದಲ್ಲಿದೆ ಎಂದು ಅದು ತಿಳಿಸಿದೆ.

ಈವರೆಗೆ ಚೇತರಿಕೆ ಪ್ರಕರಣಗಳ ಸಂಖ್ಯೆಯು 73,15,989 ಆಗಿದೆ. ಇದೇ ವೇಳೆ ಚೇತರಿಸಿಕೊಂಡ ಪ್ರಕರಣಗಳು ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆಗಳ ನಡುವಿನ ವ್ಯತ್ಯಾಸವು 67,12,302ಕ್ಕೆ ತಲುಪಿದೆ. ಚೇತರಿಕೆ ಪ್ರಕರಣಗಳು ಹೆಚ್ಚುತ್ತಿರುವುದರೊಂದಿಗೆ ಈ ಅಂತರವೂ ಹೆಚ್ಚಾಗುತ್ತಿದೆ ಎಂದು ಬೆಟ್ಟು ಮಾಡಿರುವ ಹೇಳಿಕೆಯು,ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಒಟ್ಟು 56,480 ಜನರು ಕೊರೋನ ಮುಕ್ತರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ ಮತ್ತು ಈ ಅವಧಿಯಲ್ಲಿ 49,881 ಹೊಸ ಪ್ರಕರಣಗಳು ವರದಿಯಾಗಿವೆ ಎಂದು ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News