ರೆಮ್‌ಡೆಸಿವಿರ್, ಫೆವಿಪಿರವಿರ್ ಔಷಧ ಬಳಕೆ: ಕೇಂದ್ರದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

Update: 2020-10-29 17:49 GMT

ಹೊಸದಿಲ್ಲಿ, ಅ. 29: ರೆಮ್‌ಡೆಸಿವಿರ್ ಹಾಗೂ ಫೆವಿಪಿರವಿರ್ ಔಷಧಗಳನ್ನು ಯಾವುದೇ ಅನುಮತಿ ಇಲ್ಲದೆ ಕೊರೋನ ಚಿಕಿತ್ಸೆಗೆ ಬಳಸಲಾಗುತ್ತಿದೆ ಎಂಬ ಆರೋಪದ ಕುರಿತು ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರಕಾರಕ್ಕೆ ಸೂಚಿಸಿದೆ.

ಈ ಬಗೆಗಿನ ಮನವಿಯ ಹಿನ್ನೆಲೆಯಲ್ಲಿ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೋಬ್ಡೆ ನೇತೃತ್ವದ ನ್ಯಾಯಪೀಠ ಕೇಂದ್ರ ಸರಕಾರಕ್ಕೆ ನೋಟಿಸು ಜಾರಿ ಮಾಡಿದೆ ಹಾಗೂ ನಾಲ್ಕು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ತಿಳಿಸಿದೆ. ವಿಶ್ವಸಂಸ್ಥೆಯ ಅಕ್ಟೋಬರ್ 15ರ ವರದಿ ಉಲ್ಲೇಖಿಸಿದ ದೂರುದಾರ ಹಾಗೂ ವಕೀಲ ಎಂ.ಎಲ್. ಶರ್ಮಾ, ಈ ಎರಡು ಔಷಧಗಳನ್ನು ಕೊರೋನ ಚಿಕಿತ್ಸೆಗೆ ಬಳಸಬಹುದು ಎಂದು ಎಲ್ಲಿಯೂ ಹೇಳಿಲ್ಲ ಎಂದು ನ್ಯಾಯಮೂರ್ತಿಗಳಾದ ಎ.ಎಸ್. ಬೋಪಣ್ಣ ಹಾಗೂ ವಿ. ರಾಮಸುಬ್ರಹ್ಮಣ್ಯ ಅವರನ್ನು ಕೂಡ ಒಳಗೊಂಡ ನ್ಯಾಯಪೀಠಕ್ಕೆ ತಿಳಿಸಿದರು. ಈ ಎರಡು ಔಷಧಗಳನ್ನು ಕೊರೋನ ಸೋಂಕಿಗೆ ಅಧಿಕೃತವಾಗಿ ಬಳಸುವ ಬಗ್ಗೆ ಎಲ್ಲಿಯೂ ಮಾಹಿತಿ ಇಲ್ಲ ಎಂಬ ವಿಚಾರ ತಿಳಿಸುವ ಸಲುವಾಗಿ ಕೇಂದ್ರ ಸರಕಾರಕ್ಕೆ ನೋಟಿಸು ಜಾರಿ ಮಾಡಲಾಗಿದೆ ಎಂದು ನ್ಯಾಯಪೀಠ ಹೇಳಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News