×
Ad

ಮದುವೆ ಮನೆಯಿಂದ ವಾಪಸಾಗುತ್ತಿದ್ದ ಒಂದೇ ಕುಟುಂಬದ ಏಳು ಮಂದಿ ರಸ್ತೆ ಅಪಘಾತಕ್ಕೆ ಬಲಿ

Update: 2020-10-30 12:43 IST

ಹೈದರಾಬಾದ್: ಮದುವೆ ಕಾರ್ಯಕ್ರಮ ಮುಗಿಸಿ ಮನೆಗೆ ವಾಪಸಾಗುತ್ತಿದ್ದ ಒಂದೇ ಕುಟುಂಬದ ಏಳು ಮಂದಿ ಸದಸ್ಯರುಗಳು ಪೂರ್ವ ಗೋದಾವರಿ ಜಿಲ್ಲೆಯ ಗೋಕವರಮ್‌ನಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಗುರುವಾರ ರಾತ್ರಿ ತಂಟಿಕೊಂಡಾ ಕಲ್ಯಾಣ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿವಾಹ ಸಮಾರಂಭ ಮುಗಿಸಿ ವಾಪಸಾಗುತ್ತಿದ್ದ ವೇಳೆ ಈ ಘಟನೆ ನಡೆದಿದೆ.

  ಶುಕ್ರವಾರ ಬೆಳಗ್ಗಿನ ಜಾವ 2:30ರ ಸುಮಾರಿಗೆ ಮದುವೆ ಕಾರ್ಯಕ್ರಮ ಮುಗಿದ ಬಳಿಕ ನವದಂಪತಿಗಳ 20 ಸಂಬಂಧಿಕರು ಟ್ರಕ್‌ನಲ್ಲಿ ತಮ್ಮೂರಿನತ್ತ ಹೊರಟ್ಟಿದ್ದರು. ಮನೆಯತ್ತ ಸಾಗುತ್ತಿದ್ದಾಗ ಟ್ರಕ್‌ನ ಬ್ರೇಕ್‌ಫೈಲ್ ಆಗಿದ್ದು, ಚಾಲಕ ನಿಯಂತ್ರಣ ಕಳೆದುಕೊಂಡ ಕಾರಣ ಟ್ರಕ್ ಮಗುಚಿಬಿದ್ದಿದೆ. ಟ್ರಕ್‌ನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ಆಸ್ಪತ್ರೆಯ ದಾರಿಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದಲ್ಲಿ ಗಂಭೀರ ಗಾಯಗೊಂಡವರನ್ನು ರಾಜಾಮುಂಡ್ರಿಯ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News