ಏಳು ವರ್ಷದ ಬಾಲಕಿಯ ಅತ್ಯಾಚಾರಗೈದ ಬಾಲಕನ ಬಂಧನ
Update: 2020-10-30 14:46 IST
ಲಕ್ನೊ: ಉತ್ತರಪ್ರದೇಶದ ಶಹಜಹಾನ್‌ಪುರ ಗ್ರಾಮದಲ್ಲಿ ಏಳರ ಹರೆಯದ ಬಾಲಕಿಯನ್ನು 15 ವರ್ಷದ ಅಪ್ರಾಪ್ತ ಬಾಲಕ ಅತ್ಯಾಚಾರ ನಡೆಸಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಗುರುವಾರ ಸಂಜೆ ಈ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ(ಗ್ರಾಮೀಣ)ಅಪರ್ಣ ಗೌತಮ್ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. ಏಳು ವರ್ಷದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕನನ್ನು ಬಾಲಾಪರಾಧಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.