ಕರ್ನಾಟಕ ರಾಜ್ಯ ಮುಕ್ತ ವಿವಿ ಪ್ರವೇಶಾತಿ ನ.30ರವರೆಗೆ ವಿಸ್ತರಣೆ

Update: 2020-10-30 13:30 GMT

ಬೆಂಗಳೂರು, ಅ.30: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು 20200-21ನೇ ಸಾಲಿನ ಶೈಕ್ಷಣಿಕ ಸಾಲಿಗೆ ಪ್ರವೇಶಾತಿ ಆರಂಭಿಸಿದ್ದು, ದಂಡ ಶುಲ್ಕವಿಲ್ಲದೆ ಪ್ರವೇಶಾತಿ ಅವಧಿಯನ್ನು ನ.30ರವರೆಗೆ ವಿಸ್ತರಿಸಿದೆ.

ಸ್ನಾತಕ, ಸ್ನಾತಕೋತ್ತರ ಕೋರ್ಸ್ ಗಳಾದ ಬಿಎ, ಬಿಕಾಂ, ಎಂಎ, ಎಂಸಿಜೆ, ಎಂಕಾಂ, ಬಿಎಲ್‍ಐಎಸ್ಸಿ, ಎಂಎಲ್‍ಐಎಸ್ಸಿ, ಎಂಎಸ್ಸಿ, ಎಂಬಿಎ ಪಿಜಿ ಡಿಪ್ಲೋಮಾ ಪ್ರೋಗ್ರಾಮ್ಸ್, ಡಿಪ್ಲೋಮಾ ಪ್ರೋಗ್ರಾಮ್ಸ್ ಕೋರ್ಸ್‍ಗಳಿಗೆ ಪ್ರವೇಶಾತಿಯನ್ನು ಆರಂಭಿಸಿದ್ದು, ಕೋವಿಡ್ ಹಿನ್ನೆಲೆಯಲ್ಲಿ ದಿನಾಂಕವನ್ನು ವಿಸ್ತರಿಸಲಾಗಿದೆ.

ವಿದ್ಯಾರ್ಥಿಗಳಿಗೆ ಮತ್ತು ಪೋಷಕರು ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಅಧಿಕೃತ ವೆಬ್‍ಸೈಟ್ www.ksoumysuru.ac.in ನಲ್ಲಿ ಅರ್ಜಿ ಭರ್ತಿಮಾಡಿ, ನಂತರ ಅದನ್ನು ಡೌನ್‍ಲೋಡ್ ಮಾಡಿಕೊಂಡು ಪ್ರಾದೇಶಿಕ ಕೇಂದ್ರಗಳಲ್ಲಿ ಸಲ್ಲಿಸಿ ಪ್ರವೇಶಾತಿ ಪಡೆಯಲು ಪ್ರಾದೇಶಿಕ ನಿರ್ದೇಶಕ ಡಾ.ಲೋಕೇಶ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News