ಮಾದಕ ವಸ್ತು ಮಾರಾಟ ಆರೋಪ: ಟೆಕ್ಕಿ ಬಂಧನ

Update: 2020-10-30 13:45 GMT

ಬೆಂಗಳೂರು, ಅ.30: ವಿದೇಶದಿಂದ ಮಾದಕ ವಸ್ತುಗಳನ್ನು ಆಮದು ಮಾಡಿಕೊಂಡು ಮಾರಾಟ ಆರೋಪದಡಿ ಸಾಫ್ಟ್ ವೇರ್ ಇಂಜಿನಿಯರೊರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ನಗರದ ಖಾಸಗಿ ಕಂಪೆನಿಯೊಂದರಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದ ಸಾರ್ಥಕ್ ಆರ್ಯ ಬಂಧಿತ ಆರೋಪಿ ಎಂದು ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

ಆರೋಪಿ ಕೊರಿಯರ್ ಮೂಲಕ ನಗರಕ್ಕೆ ಮಾದಕ ವಸ್ತುಗಳನ್ನು ತರಿಸುತ್ತಿದ್ದ ಎಂಬ ಮಾಹಿತಿ ಬಗ್ಗೆ ಚಾಮರಾಜಪೇಟೆ ಫಾರಿನರ್ಸ್ ಪೋಸ್ಟ್ ಆಫೀಸ್‍ನಲ್ಲಿ ಸಿಸಿಬಿ ಪರಿಶೀಲನೆ ನಡೆಸಿದರು. ಬಳಿಕ ಟ್ರ್ಯಾಕ್ ರೆಕಾರ್ಡ್ ಮೂಲಕ ಎಚ್‍ಎಸ್‍ಆರ್ ಲೇಔಟ್‍ನ ಆರೋಪಿ ಮನೆಯಲ್ಲಿ ಪೊಲೀಸರು ಶೋಧ ನಡೆಸಿದ್ದರು.

ಮನೆಯಲ್ಲಿ 4.99 ಗ್ರಾಂ ಎಲ್‍ಎಸ್‍ಡಿ, ಎಂಎಚ್ ಸೀರಿಸ್ ಪಾಕೆಟ್ ಸ್ಕೇಲ್, ಬ್ರೌನ್ ಸ್ಮೋಕ್ ಪೇಪರ್ ಪಾಕೆಟ್, ಒಸಿಬಿ ಸ್ಲಿಮ್ ಸ್ಮೋಕ್ ಪೇಪರ್ ಪಾಕೆಟ್, ರಾ ಟಿಪ್ಸ್ ಸ್ಮೋಕ್ ಪೇಪರ್ ಪಾಕೆಟ್, 100ಎಂಎಲ್ ಕೆಮಿಕಲ್ ಆಯಿಲ್ ಪತ್ತೆಯಾಗಿದ್ದು ಅದನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಎಚ್‍ಎಸ್‍ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News