ಡಾ.ಅರುಣ್ ಕುಮಾರ್-ಲೋಕು ಪೂಜಾರಿಗೆ ‘ಬನ್ನಂಜೆ ಬಾಬು ಅಮೀನ್ ಜಾನಪದ ಪ್ರಶಸ್ತಿ’

Update: 2020-10-30 14:21 GMT
ಅರುಣ್- ಲೋಕ

ಉಡುಪಿ, ಅ.30: ಯುವವಾಹಿನಿ ಉಡುಪಿ ಘಟಕದ ನೇತೃತ್ವದಲ್ಲಿ ನೀಡುವ ‘ಬನ್ನಂಜೆ ಬಾಬು ಅಮೀನ್ ಜಾನಪದ ವಿದ್ವಾಂಸ ಪ್ರಶಸ್ತಿ’ಗೆ ಹಿರಿಯ ಜಾನಪದ ವಿದ್ವಾಂಸ ಡಾ.ಎಸ್.ಆರ್.ಅರುಣ್ ಕುಮಾರ್ ಮತ್ತು ಜಾನಪದ ಕಲಾವಿದ ಪ್ರಶಸ್ತಿಗೆ ದರ್ಶನ ಪಾತ್ರಿ ಮೂಜೂರು ಲೋಕು ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ.

ಮಂಗಳೂರು ವಿವಿಯ ನಾರಾಯಣಗುರು ಅಧ್ಯಯನ ಪೀಠದ ನಿರ್ದೇಶಕ ಹಾಗೂ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷ ಮುದ್ದು ಮೂಡುಬೆಳ್ಳೆ ಅಧ್ಯಕ್ಷತೆಯಲ್ಲಿ ನಡೆ ಸಭೆಯಲ್ಲಿ ಈ ಆಯ್ಕೆ ಮಾಡಲಾಯಿತು.
ಪ್ರಶಸ್ತಿ ಪ್ರದಾನ ಸಮಾರಂಭವು ನ.8ರಂದು ಬೆಳಗ್ಗೆ 10:30ಕ್ಕೆ ಚಿಟ್ಪಾಡಿಯ ಲಕ್ಷ್ಮೀ ಟ್ರೇಡ್ ಸೆಂಟರಿನ ಲಕ್ಷ್ಮೀ ಸಭಾಭವನದಲ್ಲಿ ನಡೆಯಲಿದೆ. ಅಧ್ಯಕ್ಷತೆ ಯನ್ನು ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷ ಜಗದೀಶ್ ಕುಮಾರ್ ವಹಿಸಲಿರುವರು. ಮಂಗಳೂರು ಕುಲಾಲ ಸಂಘದ ಸಂಚಾಲಕ ವಿಶ್ವನಾಥ ಬಂಗೇರ ಪ್ರಶಸ್ತಿ ಪ್ರದಾನ ಮಾಡಲಿರುವರು.
ಪ್ರಾಧ್ಯಾಪಕ ಡಾ.ದುಗ್ಗಪ್ಪ ಕಜೆಕಾರ್ ಅಭಿನಂದನಾ ಭಾಷಣ ಮಾಡಲಿರು ವರು. ಯುವವಾಹಿನಿ ಕೇಂದ್ರ ಸಮಿತಿಯ ನಿಯೋಜಿತ ಅಧ್ಯಕ್ಷ ಡಾ.ರಾಜಾ ರಾಮ್, ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್, ಯುವವಾಹಿನಿ ಕೇಂದ್ರ ಸಮಿತಿ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಭಾಗವಹಿಸಲಿರುವರು ಎಂದು ಯುವವಾಹಿನಿ ಉಡುಪಿ ಘಟಕದ ಕಾರ್ಯದರ್ಶಿ ಮಾಲತಿ ಅಮೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News