ಕೊಣಾಜೆ: ಸೇಸಪ್ಪ ಟೈಲರ್ ಗೆ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Update: 2020-10-30 15:48 GMT

ಕೊಣಾಜೆ: ಪಜೀರು ಗ್ರಾಮದ ಸುದರ್ಶನ ನಗರದ ಸೇಸಪ್ಪ ಟೈಲರ್ ಅವರು ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ವೃತ್ತಿಯಲ್ಲಿ ಟೈಲರ್ ಆಗಿರುವ ಇವರು ಪಜೀರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ, ತಾಲೂಕು‌ ಪಂಚಾಯಿತಿ ಸದಸ್ಯರಾಗಿದ್ದುಕೊಂದು ಹಲವು ಅಭಿವೃದ್ಧಿ ಕಾಮಗಾರಿಗಳ ರೂವಾರಿಯಾಗಿದ್ದಾರೆ. ಅಲ್ಲದೆ ಧಾರ್ಮಿಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದು ಕೆಲಸ ಮಾಡಿರುವ ಇವರು ಸಾಮಾಜಿಕ ವಾಗಿಯೂ ತೊಡಗಿಸಿಕೊಂಡಿದ್ದರು. ಇದೀಗ 2020 ನೇ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಗೆ ಇವರು ಭಾಜನರಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News