ಬೆಳಪುವಿನಲ್ಲಿ ಬ್ಯಾಟರಿ ಕಳವು ಪ್ರಕರಣ : ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

Update: 2020-10-30 16:54 GMT

ಕಾಪು : ಬ್ಯಾಟರಿ ಕಳವುಗೈಯ್ಯುತ್ತಿದ್ದ ಆರೋಪದಲ್ಲಿ ವ್ಯಕ್ತಿಯನ್ನು ಸ್ಥಳೀಯರೇ ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಬೆಳಪುವಿನಲ್ಲಿ ಶುಕ್ರವಾರ ನಡೆದಿದೆ.

ಆರೋಪಿಯನ್ನು ಕಳತ್ತೂರು ನಿವಾಸಿ ಕಿರಣ್ (37) ಎಂದು ಗುರುತಿಸಲಾಗಿದೆ. ಬೆಳಪು ಪಂಚಾಯತ್ ವ್ಯಾಪ್ತಿಯಲ್ಲಿ ಪದೇ ಪದೇ ಕಳ್ಳತನ ನಡೆಯುತಿತ್ತು. ಇದರಿಂದ ಬೇಸತ್ತ ಗ್ರಾಮಸ್ಥರು  ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಅವರ ಬಳಿ ದೂರಿದ್ದರು. ಇದನ್ನು ತಡೆಯುವ ನಿಟ್ಟಿನಲ್ಲಿ  ಸ್ಥಳೀಯ ಯುವಕರ ತಂಡವನ್ನು ದೇವಿಪ್ರಸಾದ್ ನೇತೃತ್ವದಲ್ಲಿ ರಚಿಸಿದ್ದರು. ಕಳವು ಪತ್ತೆಗೆ ಕಳೆದ ಹಲವು ದಿನಗಳಿಂದ ಯುವಕರ ತಂಡ ಹಾಗು ಪೊಲೀಸರು ಕಾರ್ಯಾಚರಣೆಯಲ್ಲಿ ನಿರತರಾಗಿದ್ದರು.

ಶುಕ್ರವಾರ ಸೋಲಾರ್ ಬ್ಯಾಟರಿ ಕಳವು ಮಾಡುತಿದ್ದ ಎನ್ನಲಾಗಿದ್ದು, ಈ ವೇಳೆ ಯುವಕರನ್ನು ಕಂಡು ಪರಾರಿಯಾಗಲು ಯತ್ನಿಸಿದಾಗ, ಸ್ಥಳೀಯ ಯುವಕರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಪೊಲೀಸರು, ಆರೋಪಿಯ ಸಹಿತ ಆತನಿಂದ ಬ್ಯಾಟರಿಗಳನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಯಚಾರಣೆಗೆ ಸಾರ್ವಜನಿಕವಾಗಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಆರೋಪಿ ಈ ಹಿಂದೆಯೂ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಶಿರ್ವ ಠಾಣೆ ಪಿಎಸ್‍ಐ ಶ್ರೀ ಶೈಲ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News