ಮೆಣಸಿನಕಾಯಿ ಬೆಳೆ ನೀರು ಪಾಲು: ಕಂಗೆಟ್ಟ ರೈತನಿಂದ ಬೆಳೆ ನಾಶ

Update: 2020-10-30 17:54 GMT

ಧಾರವಾಡ, ಅ.30: ಧಾರವಾಡ ಜಿಲ್ಲೆಯಲ್ಲಿ ಇತ್ತೀಚಿಗೆ ಎಡೆಬಿಡದೆ ಸುರಿದ ಭಾರೀ ಮಳೆಯಿಂದಾಗಿ ಅಪಾರ ಪ್ರಮಾಣದ ಮೆಣಸಿನಕಾಯಿ ಬೆಳೆ ಹಾನಿಯಾಗಿದೆ. ಇದರಿಂದ, ನೊಂದ ಕುಂದಗೋಳ ತಾಲೂಕಿನ ರೈತ ಗುಡೇನಕಟ್ಟಿ ಗ್ರಾಮದ ಬಸವರಾಜ್ ಯೋಗಪ್ಪನವರ ಅಳಿದುಳಿದ ಮೆಣಸಿನಕಾಯಿ ಬೆಳೆಯನ್ನೂ ನಾಶಪಡಿಸಿದ್ದಾರೆ.

ಸತತ ಮಳೆಯಿಂದ ಮೆಣಸಿನಕಾಯಿ ಬೆಳೆ ಕಳೆದುಕೊಂಡು ಕಂಗಾಲಾದ ರೈತ ಟ್ರ್ಯಾಕ್ಟರ್ ರೂಟರ್ ಮೂಲಕ ಜಮೀನಿನಲ್ಲಿ ಬೆಳೆದ ಮೆಣಸಿನಕಾಯಿ ಬೆಳೆ ನಾಶ ಮಾಡಿದ್ದಾರೆ.

ಭಾರೀ ಮಳೆಯಿಂದ ಜಮೀನು, ರಸ್ತೆಗಳೆಲ್ಲವೂ ಹದಗೆಟ್ಟು ಹೋಗಿವೆ. ಜಿಲ್ಲೆಯಲ್ಲಿ ಮಳೆಯಿಂದ ಈವರೆಗೆ 8750 ಹೆಕ್ಟರ್ ಮೆಣಸಿನಕಾಯಿ ಬೆಳೆ ಹಾನಿಯಾಗಿದೆ. ಕೂಡಲೇ ಹಾನಿಗೊಳಗಾದ ಬೆಳೆಗೆ ಪರಿಹಾರ ನೀಡಬೇಕೆಂದು ರೈತರು ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News