ಎಸ್ಕಾಂಗಳಲ್ಲಿ 5 ಲಕ್ಷದವರಗೆ ತುಂಡು ಗುತ್ತಿಗೆಗೆ ರಾಜ್ಯ ಸರಕಾರ ಅನುಮತಿ

Update: 2020-10-30 18:14 GMT

ಬೆಂಗಳೂರು, ಅ.30: ಇಂಧನ ಇಲಾಖೆ ವ್ಯಾಪ್ತಿಯ ಎಸ್ಕಾಂಗಳಲ್ಲಿ 1 ಲಕ್ಷದಿಂದ 5 ಲಕ್ಷ ರೂಪಾಯಿ ಮೊತ್ತದ ವಿದ್ಯುತ್ ಕಾಮಗಾರಿಗಳನ್ನು ತುಂಡು ಗುತ್ತಿಗೆ ಮೂಲಕ ನೀಡಲು ರಾಜ್ಯ ಸರಕಾರ ಅನುಮತಿ ನೀಡಿದೆ. ಇಂಧನ ಇಲಾಖೆಯ ಪ್ರಧಾನ ಕಾರ್ಯದರ್ಶಿ ಈ ಕುರಿತು ಆದೇಶ ಹೊರಡಿಸಿದ್ದು. ಈ ಮೂಲಕ ವಿದ್ಯುತ್ ಗುತ್ತಿಗಾದಾರರ ಬೇಡಿಕೆಗಳನ್ನು ಈಡೇರಿಸಿದ್ದಾರೆ.

ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ. ಗೋಪಾಲಯ್ಯ ಅವರು ಇತ್ತೀಚೆಗೆ ವಿದ್ಯುತ್ ಗುತ್ತಿಗೆದಾರರು ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ತೆರಳಿ ಸಂಘದ ಸಮಸ್ಯೆಗಳನ್ನು ಸರಕಾರದ ಗಮನಕ್ಕೆ ತಂದು ಬಗೆಹರಿಸುವುದಾಗಿ ವಾಗ್ದಾನ ನೀಡಿದ್ದರು. ನಂತರ ಸಚಿವರು ಹಲವು ಬೇಡಿಕೆಗಳನ್ನು ಈಡೇರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಪ್ರಥಮ ಬೇಡಿಕೆ ಈಡೇರಿಸಿದ ಸರ್ಕಾರಕ್ಕೆ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.

ರಾಜ್ಯದಲ್ಲಿ ಚುನಾವಣೆ ಮುಗಿದ ನಂತರ ನವೆಂಬರ್ 5 ರಂದು ನಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸುವ ಕುರಿತು ಚರ್ಚೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಇಂಧನ ಇಲಾಖೆಯ ಪ್ರಧಾನ ಕಾರ್ಯದರ್ಶಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News