ದೇಶದ ಅತ್ಯುತ್ತಮ ಆಡಳಿತವಿರುವ ರಾಜ್ಯಗಳ ಪಟ್ಟಿಯಲ್ಲಿ ಕೇರಳ ಪ್ರಥಮ, ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ

Update: 2020-10-31 07:15 GMT

ಹೊಸದಿಲ್ಲಿ: ಪಬ್ಲಿಕ್ ಅಫೇರ್ಸ್ ಸೆಂಟರ್ ಎಂಬ ಸಂಸ್ಥೆ ಬಿಡುಗಡೆಗೊಳಿಸಿದ 'ಪಬ್ಲಿಕ್ ಅಫೇರ್ಸ್ ಇಂಡೆಕ್ಸ್-2020' ಇದರಲ್ಲಿ ಕೇರಳ ದೇಶದ ಅತ್ಯುತ್ತಮ ಆಡಳಿತವಿರುವ ರಾಜ್ಯವೆಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದರೆ ಉತ್ತರ ಪ್ರದೇಶ ಈ ಸೂಚ್ಯಂಕದಲ್ಲಿ ಕೊನೆಯ ಸ್ಥಾನ ಪಡೆದಿದೆ. ಕೇಂದ್ರಾಡಳಿತ ಪ್ರದೇಶಗಳ ಪೈಕಿ ಚಂಡೀಗಢ ಮೊದಲ ಸ್ಥಾನ ಪಡೆದಿದೆ.

ಸುಸ್ಥಿರ ಅಭಿವೃದ್ಧಿ ಮಾನದಂಡದ ಆಧಾರದಲ್ಲಿ ಈ ಸೂಚ್ಯಂಕದಲ್ಲಿ ರ್ಯಾಂಕಿಂಗ್ ನೀಡಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷರಾಗಿರುವ ಇಸ್ರೋದ ಮಾಜಿ ಮುಖ್ಯಸ್ಥ ಕೆ ಕಸ್ತೂರಿರಂಗನ್ ಹೇಳಿದ್ದಾರೆ.

ಎರಡು ಕೋಟಿಗಿಂತ ಅಧಿಕ ಜನಸಂಖ್ಯೆಯಿರುವ 18 ರಾಜ್ಯಗಳ ಪೈಕಿ ಕೇರಳ, ತಮಿಳುನಾಡು, ಆಂಧ್ರ ಪ್ರದೇಶ ಹಾಗೂ ಕರ್ನಾಟಕ ಮೊದಲ ನಾಲ್ಕು ಸ್ಥಾನಗಳನ್ನು ಪಡೆದರೆ, ಉತ್ತರ ಪ್ರದೇಶ, ಒಡಿಶಾ ಹಾಗೂ ಬಿಹಾರ  ನೆಗೆಟಿವ್ ಅಂಕಗಳನ್ನು ಪಡೆದು ಕೊನೆಯ ಸ್ಥಾನಗಳಲ್ಲಿವೆ.

ಎರಡು ಕೋಟಿಗೂ ಕಡಿಮೆ ಜನಸಂಖ್ಯೆಯ ರಾಜ್ಯಗಳ ಪೈಕಿ ಗೋವಾ ಪ್ರಥಮ ಸ್ಥಾನ ಪಡೆದರೆ ಮೇಘಾಲಯ ಹಾಗೂ ಹಿಮಾಚಲ ಪ್ರದೇಶ ನಂತರದ ಸ್ಥಾನಗಳನ್ನು ಪಡೆದಿವೆ. ಮಣಿಪುರ, ದಿಲ್ಲಿ ಹಾಗೂ ಉತ್ತರಾಖಂಡ ಕೊನೆಯ ಸ್ಥಾನಗಳನ್ನು ಗಳಿಸಿದ ಸಣ್ಣ ರಾಜ್ಯಗಳಾಗಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News