ಕೊರೋನ ಸೋಂಕಿತರಿಗೆ ಶೇ.50ರಷ್ಟು ಬೆಡ್ ನೀಡದ 7 ಖಾಸಗಿ ಆಸ್ಪತ್ರೆಗಳಿಗೆ ಶೋಕಾಸ್ ನೋಟಿಸ್

Update: 2020-10-31 11:17 GMT

ಬೆಂಗಳೂರು, ಅ.31: ಕೊರೋನ ಸೋಂಕಿತ ರೋಗಿಗಳಿಗೆ ಸರಕಾರದ ಆದೇಶದಂತೆ ಶೇ.50ರಷ್ಟು ಬೆಡ್ ನೀಡದ ಹಾಗೂ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡದ ನಗರದ ಏಳು ಖಾಸಗಿ ಆಸ್ಪತ್ರೆಗಳಿಗೆ ಬಿಬಿಎಂಪಿ ಶೋಕಾಸ್ ನೋಟಿಸ್ ನೀಡಿದ್ದು, 24 ಗಂಟೆಯೊಳಗೆ ಉತ್ತರಿಸುವಂತೆ ಸೂಚಿಸಿದೆ.

ನಗರದ ಒಟ್ಟು 7 ಆಸ್ಪತ್ರೆಗಳಿಗೆ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ.

ಕೊರೋನ ಸೋಂಕಿತರ ಚಿಕಿತ್ಸೆಗೆ ಆನ್‍ಲೈನ್ ಪೋರ್ಟ್‍ನಲ್ಲಿ ಹಾಸಿಗೆ ಬ್ಲಾಕ್ ಮಾಡಿದರೂ, ದಾಖಲಿಸುವ ವೇಳೆ ಆಸ್ಪತ್ರೆಯಲ್ಲಿ ಹಾಸಿಗೆಗಳು ಖಾಲಿ ಇಲ್ಲ ಎಂದು ಹೇಳಿ ಚಿಕಿತ್ಸೆಗೆ ನಿರಾಕರಿಸಲಾಗುತ್ತಿತ್ತು. ಅಲ್ಲದೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್(ಎಸ್‍ಎಎಸ್‍ಟಿ) ಪೋರ್ಟ್‍ನಲ್ಲಿ ವಿವರವಾದ ಮಾಹಿತಿ ನೀಡಿಲ್ಲ ಎಂದು ನೋಟಿಸ್ ನೀಡಲಾಗಿದೆ.

ಬಿಬಿಎಂಪಿ ನೀಡಿರುವ ಶೋಕಾಸ್ ನೋಟಿಸ್‍ಗೆ ಇಪ್ಪತ್ನಾಲ್ಕು ಗಂಟೆಯೊಳಗೆ ಸರಿಯಾದ ಉತ್ತರ ಸಿಗದಿದ್ದರೆ, ಆಸ್ಪತ್ರೆಯ ಪರವಾನಿಗೆ ರದ್ದು ಮಾಡುವುದಾಗಿ ತಿಳಿಸಿದೆ. ಅಲ್ಲದೆ ಮೊದಲ ಹಂತದಲ್ಲಿ ಒಪಿಡಿ ಬಂದ್ ಮಾಡಿ, ಆಸ್ಪತ್ರೆಯ ರೋಗಿಗಳನ್ನು ಬೇರೆಡೆ ಸ್ಥಳಾಂತರ ಮಾಡಿ, ಆಸ್ಪತ್ರೆ ಬಂದ್ ಮಾಡಿಸುವುದಾಗಿ ಎಚ್ಚರಿಕೆ ನೀಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News