ಕುದ್ರುಗಳ ಅಭಿವೃದ್ಧಿ: ಶಾಸಕ ಕಾಮತ್, ಜಿಲ್ಲಾಧಿಕಾರಿ ಪರಿಶೀಲನೆ

Update: 2020-10-31 13:58 GMT

ಮಂಗಳೂರು, ಅ.31: ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುದ್ರುಗಳ ಅಭಿವೃದ್ಧಿಗೆ ಸಂಬಂಧಿಸಿ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರ ನೇತೃತ್ವದಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ವೀಕ್ಷಣೆ ನಡೆಸಿದರು.

ಈ ಸಂದರ್ಭ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿಯ ಕುರಿತು ಅನೇಕ ಯೋಚನೆಗಳಿವೆ. ಪ್ರಮುಖವಾಗಿ ಕುದ್ರುಗಳನ್ನು ಅಭಿವೃದ್ಧಿಪಡಿಸಿ ಪ್ರವಾಸೋದ್ಯಮವನ್ನು ಬೆಳೆಸುವ ಕಾರ್ಯದ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಲಾಗುವುದು. ಈ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ, ಮೇಯರ್, ಮನಪಾ ಸ್ಥಾಯಿ ಸಮಿತಿ ಅಧ್ಯಕ್ಷರು ಹಾಗೂ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಲಾಗಿದೆ ಎಂದಿದ್ದಾರೆ.

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ದಿವಾಕರ್ ಪಾಂಡೇಶ್ವರ, ಸಹಾಯಕ ಆಯುಕ್ತರು, ಪಾಲಿಕೆ ಸ್ಥಾಯಿ ಸಮಿತಿ ಅದ್ಯಕ್ಷ ಪ್ರೇಮಾನಂದ ಶೆಟ್ಟಿ, ಪೂರ್ಣಿಮಾ, ಜಗದೀಶ್ ಶೆಟ್ಟಿ ಬೋಳೂರು, ಕಿರಣ್ ಕುಮಾರ್, ಸ್ಥಳೀಯ ಮನಪಾ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News