×
Ad

ವಿಧಾನಪರಿಷತ್ ಚುನಾವಣೆಯ ಮತ ಎಣಿಕೆ ದಿನಾಂಕ ಮುಂದೂಡಿಕೆ

Update: 2020-10-31 20:20 IST

ಬೆಂಗಳೂರು, ಅ.31: ವಿಧಾನಪರಿಷತ್ ಚುನಾವಣೆಯ ಮತ ಎಣಿಕೆಯನ್ನು ನ.10ರಂದು ನಡೆಸಲಾಗುತ್ತದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕೇಂದ್ರ ಚುನಾವಣಾ ಆಯೋಗವು, ಅ.28ರಂದು ರಾಜ್ಯದ ಎರಡು ಶಿಕ್ಷಕರ ಹಾಗೂ ಎರಡು ಪದವೀಧರ ಕ್ಷೇತ್ರಗಳಿಗೆ ಮತದಾನ ನಡೆದಿದ್ದು, ಇದರ ಮತದಾನ ಎಣಿಕೆ ಪ್ರಕ್ರಿಯೆಯು ನ.2ರ ಬದಲು ನ.10ಕ್ಕೆ ನಡೆಸಲಾಗುತ್ತದೆ. ಅಲ್ಲದೇ ನ.13ಕ್ಕೆ ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಳಿಸಲಾಗುತ್ತಿದೆ ಎಂಬುದಾಗಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News