ದ.ಕ. ಜಿಲ್ಲೆ : 95 ಮಂದಿಗೆ ಸೋಂಕು; ಕೋವಿಡ್ ಗೆ ಓರ್ವ ಬಲಿ

Update: 2020-10-31 15:31 GMT

ಮಂಗಳೂರು, ಅ.31: ದ.ಕ. ಜಿಲ್ಲೆಯಲ್ಲಿ ಕೊರೋನದಿಂದ ಶನಿವಾರ ವ್ಯಕ್ತಿ ಮೃತಪಟ್ಟಿದ್ದು, ಹೊಸದಾಗಿ 95 ಮಂದಿಗೆ ಸೋಂಕು ತಗುಲಿದೆ. ಈ ನಡುವೆ 171 ಮಂದಿ ಕೊರೋನದಿಂದ ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿನ 30,242 ಸೋಂಕಿತರ ಪೈಕಿ 27,812 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 677 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 1,753 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದ.ಕ. ಜಿಲ್ಲೆಯಲ್ಲಿ 10,486 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿದ್ದು, 11,62,237 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News