ನಿವೃತ್ತ ಮುಖ್ಯೋಪಾಧ್ಯಾಯ ಮುರಳಿ ಕಡೆಕಾರ್‌ಗೆ ಅಭಿನಂದನೆ

Update: 2020-10-31 15:22 GMT

ಉಡುಪಿ, ಅ.31: ನಿಟ್ಟೂರು ಪ್ರೌಢಶಾಲೆಯಲ್ಲಿ 32 ವರ್ಷ ಶಿಕ್ಷಕರಾಗಿ, 5 ವರ್ಷ ಮುಖ್ಯ ಶಿಕ್ಷಕರಾಗಿ ಕಾರ್ಯನಿರ್ವಹಿಸಿ ಸೇವಾ ನಿವೃತ್ತಿ ಹೊಂದುತ್ತಿರುವ ಮುಖ್ಯೋಪಾಧ್ಯಾಯ ಮುರಳಿ ಕಡೆಕಾರ್ ಅವರಿಗೆ ಅಭಿನಂದನಾ ಕಾರ್ಯಕ್ರಮವನ್ನು ಶನಿವಾರ ಶಾಲಾ ರಜತ ಸಭಾಭವನ ದಲ್ಲಿ ಏರ್ಪಡಿಸಲಾಗಿತ್ತು.

ಅದಮಾರು ಹಿರಿಯ ಮಠಾಧೀಶ ಶ್ರೀವಿಶ್ವಪ್ರಿಯ ತೀರ್ಥ ಸ್ವಾಮೀಜಿ ಮಾತ ನಾಡಿ, ಕರ್ತವ್ಯ/ಜವಾಬ್ದಾರಿಗೆ ಬೆನ್ನು ಹಾಕದೇ ಅಭಿಮುಖವಾಗಿ ನಡೆದಾಗ ಪುಣ್ಯ ನಮ್ಮನ್ನು ನೆರಳಿನಂತೆ ಹಿಂಬಾಲಿಸಿಕೊಂಡು ಬರುತ್ತದೆ. ಇದಕ್ಕೆ ತಕ್ಕಂತೆ ಓರ್ವ ಶಿಕ್ಷಕ, ರಕ್ಷಕ, ಕೃಷಿಕ, ಪೋಷಕನಾಗಿ ದುಡಿದ ಮುರಳಿ ಕಡೆಕಾರ್ ಕೆಲಸಕ್ಕೆ ಇಡೀ ಸಮಾಜವೆ ಅಬಾರಿಯಾಗಿದೆ ಎಂದು ತಿಳಿಸಿದರು.

ನಿಟ್ಟೂರು ಎಜುಕೇಶನ್ ಸೊಸೈಟಿ ಅಧ್ಯಕ್ಷ ಹಾಗೂ ಶಾಸಕ ಕೆ.ರಘುಪತಿ ಭಟ್ ಮಾತನಾಡಿ, ಮುರಳಿ ಕಡೆಕಾರ್ ವಿವಿಧ ರಂಗದಲ್ಲಿ ವಿಶಿಷ್ಟ ಸಾಧನೆ ಮಾಡಿ ಮಾದರಿ ಶಿಕ್ಷಕರಾಗಿದ್ದಾರೆ. ಕಡೆಕಾರ್ ಆತ್ಮಸಂತೃಪ್ತಿಗಾಗಿ ಸಾಮಾಜಿಕ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.

ವಿದ್ವಾಂಸ ಡಾ.ಎಂ.ಪ್ರಭಾಕರ ಜೋಶಿ, ಹಿರಿಯ ಸಾಹಿತಿ ಅಂಬಾತನಯ ಮುದ್ರಾಡಿ, ಹಿರಿಯ ರಂಗಕರ್ಮಿ ಪ್ರೊ.ಉದ್ಯಾವರ ಮಾಧವ ಆಚಾರ್ಯ ಅಭಿನಂದನಾ ಭಾಷಣ ಮಾಡಿದರು. ಇದೇ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯ ಮುರಳಿ ಕಡೆಕಾರ್ ಅವರಿಗೆ ಸಂಬಂಧಿಸಿದ ಸಾಕ್ಷ್ಯಚಿತ್ರನ್ನು ಬಿಡುಗಡೆಗೊಳಿಸಲಾಯಿತು.

ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಕಕ್ಕುಂಜೆ ನಾಗಾನಂದ, ನಿಟ್ಟೂರು ಪ್ರೌಢಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಯೋಗೀಶ್ಚಂದ್ರಾಧರ, ಕಾರ್ಯದರ್ಶಿ ಪ್ರದೀಪ್ ಜೋಗಿ ಉಪಸ್ಥಿತರಿದ್ದರು. ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ್ ರಾವ್ ಸ್ವಾಗತಿಸಿದರು. ನಿವೃತ್ತ ಮುಖ್ಯ ಶಿಕ್ಷಕ ಎಸ್.ವಿ. ಭಟ್ ವಂದಿಸಿದರು. ಎಚ್.ಎನ್.ಶೃಂಗೇಶ್ವರ್ ಕಾರ್ಯಕ್ರಮ ನಿೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News