‘ತಾರಾ ಪ್ರಚಾರಕ’ ಸ್ಥಾನಮಾನ ರದ್ದು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕಮಲ್‌ನಾಥ್

Update: 2020-10-31 16:27 GMT

ಹೊಸದಿಲ್ಲಿ, ಅ. 31: ತನ್ನ ‘ತಾರಾ ಪ್ರಚಾರಕ’ ಸ್ಥಾನಮಾನವನ್ನು ಚುನಾವಣಾ ಆಯೋಗ ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್‌ನಾಥ್ ಅವರು ಶನಿವಾರ ಸುಪ್ರೀಂ ಕೋರ್ಟ್‌ನ ಮೆಟ್ಟಿಲೇರಿದ್ದಾರೆ.

ಮದ್ಯಪ್ರದೇಶದ 28 ವಿಧಾನ ಸಭಾ ಕ್ಷೇತ್ರಗಳಲ್ಲಿ ನಡೆಯಲಿರುವ ಉಪ ಚುನಾವಣೆಯ ಪ್ರಚಾರ ಸಂದರ್ಭ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿರುವುದಾಗಿ ಚುನಾವಣಾ ಆಯೋಗ ಕಮಲ್‌ನಾಥ್ ಅವರ ‘ತಾರಾ ಪ್ರಚಾರಕ’ ಸ್ಥಾನಮಾನವನ್ನು ರದ್ದುಗೊಳಿಸಿತ್ತು. ಚುನಾವಣಾ ಆಯೋಗದ ನಿರ್ಧಾರವನ್ನು ಕಮಲ್‌ನಾಥ್ ಅವರು ವಿವಿಧ ನೆಲೆಯಲ್ಲಿ ಪ್ರಶ್ನಿಸಿದ್ದಾರೆ ಹಾಗೂ ಮನವಿಯ ವಿಚಾರಣೆಯನ್ನು ಕೂಡಲೇ ನಡೆಸುವಂತೆ ಕೋರಿದ್ದಾರೆ ಎಂದು ಹಿರಿಯ ವಕೀಲ ಹಾಗೂ ಕಾಂಗ್ರೆಸ್ ರಾಜ್ಯ ಸಭಾ ಸದಸ್ಯ ವಿವೇಕ್ ತಂಖಾ ತಿಳಿಸಿದ್ದಾರೆ.

ನ್ಯಾಯವಾದಿ ವರುಣ್ ಚೋಪ್ರಾ ಅವರ ಮೂಲಕ ಮನವಿ ಸಲ್ಲಿಸಲಾಗಿದೆ. ಸುಪ್ರೀಂ ಕೋರ್ಟ್ ರಿಜಿಸ್ಟ್ರಿ ಗುರುತಿಸಿದ ಲೋಪಗಳನ್ನು ಸರಿಪಡಿಸಲಾಗಿದೆ ಎಂದು ತಂಕಾ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News