ರಾಜಧಾನಿಯಲ್ಲಿ 1,621 ಕೊರೋನ ಪ್ರಕರಣಗಳು ದೃಢ: 17 ಜನರು ಮೃತ

Update: 2020-10-31 17:06 GMT

ಬೆಂಗಳೂರು, ಅ.31: ನಗರದಲ್ಲಿ ಶನಿವಾರದಂದು 1,621 ಜನರಿಗೆ ಕೊರೋನ ಸೋಂಕು ದೃಢಪಟ್ಟಿದೆ. 4,679 ಸೋಂಕಿತರು ಬಿಡುಗಡೆಯಾಗಿದ್ದು, 17 ಜನರು ಮೃತರಾಗಿದ್ದಾರೆ.

ನಗರದಲ್ಲಿ ಇಲ್ಲಿಯವರಗೆ ಒಟ್ಟು 3,36,469 ಕೊರೋನ ಸೋಂಕಿತರು ದೃಢಪಟ್ಟಿದ್ದು, 3,864 ಜನರು ಸೋಂಕಿಗೆ ಬಲಿಯಾಗಿದ್ದಾರೆ. 2,98,145 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳು ಒಳಗೊಂಡಂತೆ 34,459 ಜನ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಶುಕ್ರವಾರದ ಬಿಬಿಎಂಪಿ ಕೋವಿಡ್ ವರದಿ ಪ್ರಕಾರ ನಗರದಲ್ಲಿ ಒಟ್ಟು ಸಕ್ರಿಯ 18 ಕಂಟೈನ್ಮೆಂಟ್ ಝೋನ್‍ಗಳಿವೆ. ನಗರದಲ್ಲಿ 10,19,787 ಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಲಾಗಿದ್ದು, ದ್ವಿತೀಯ ಸಂಪರ್ಕಿತ 11,86,372 ಜನರನ್ನು ಗುರುತಿಸಲಾಗಿದೆ.

ನಗರದಲ್ಲಿ ಇಲ್ಲಿಯವರೆಗೆ 22,06,159 ಜನರಿಗೆ ಕೊರೋನ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ ಪಾಸಿಟಿವ್ ಪ್ರಮಾಣ ಶೇ.11.33ರಷ್ಟಿದೆ. ಕೊರೋನಕ್ಕೆ ಮೃತರಾಗುತ್ತಿರುವ ಪ್ರಮಾಣ ಶೇ.1.15ರಷ್ಟಿದ್ದು, ಗುಣಮುಖರಾಗುತ್ತಿರುವ ಪ್ರಮಾಣ ಶೇ.87.64ರಷ್ಟಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News