ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ ಮೋದಿ

Update: 2020-11-01 05:32 GMT

ಹೊಸದಿಲ್ಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಕರ್ನಾಟಕದಾದ್ಯಂತ  ಕನ್ನಡ ರಾಜ್ಯೋತ್ಸವ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಜನತೆಗೆ ಕನ್ನಡದಲ್ಲೇ ಶುಭಾಶಯ ಕೋರಿದ್ದಾರೆ.

ಕರ್ನಾಟಕದ ನನ್ನ ಸಹೋದರ ಹಾಗೂ ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕನ್ನಡಿಗರ ಜನ ಶಕ್ತಿ ಹಾಗೂ ಕೌಶಲ್ಯದಿಂದ ಕರ್ನಾಟಕ ಪ್ರಗತಿಯ ಉತ್ತುಂಗಕ್ಕೇರುತ್ತಿದೆ. ಕರ್ನಾಟಕದ ಜನತೆಯ ಸಂತಸ ಹಾಗೂ ಉತ್ತಮ  ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಮೋದಿ ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ.

ರಾಜ್ಯಗಳು ರಚನೆಯಾದ ದಿನ ಪ್ರಯುಕ್ತ ಕರ್ನಾಟಕ ಮಾತ್ರವಲ್ಲದೆ, ಕೇರಳ, ಮಧ್ಯಪ್ರದೇಶ, ಛತ್ತೀಸ್ ಗಢ ಹಾಗೂ ಇತರ ರಾಜ್ಯಗಳ ಜನತೆಗೂ ಪ್ರಧಾನಿ ಶುಭ ಕೋರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News