×
Ad

ರಾಜ್ಯೋತ್ಸವ: ಮುಖ್ಯಮಂತ್ರಿಯಿಂದ ಕನ್ನಡ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪ ನಮನ

Update: 2020-11-01 10:40 IST

ಬೆಂಗಳೂರು, ನ.1: ಕನ್ನಡ ರಾಜ್ಯೋತ್ಸವದ ಅಂಗವಾಗಿ  ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಕನ್ನಡ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

 ಈ ನಡುವೆ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸ್ಪೆಶಲ್ ಇನಿಷಿಯೇಟಿವ್ಸ್ ರೈಡರ್ಸ್ ಸಂಸ್ಥೆ ಆಯೋಜಿಸಿದ್ದ ಬೈಕ್ ರ‍್ಯಾಲಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗೃಹ ಕಚೇರಿ ಕೃಷ್ಣಾದಲ್ಲಿಂದು ಬೆಳಗ್ಗೆ ಚಾಲನೆ ನೀಡಿದರು. ಶಾಸಕ ರವಿ ಸುಬ್ರಹ್ಮಣ್ಯ, ಸಂಸ್ಥೆಯ ಅಧ್ಯಕ್ಷ ಡಿ.ಗಣೇಶ್ ಪ್ರಸಾದ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News