ಶಾಸಕ ಯತ್ನಾಳ್ ವಿರುದ್ಧ ಪಕ್ಷದ ಚೌಕಟ್ಟಿನಲ್ಲಿ ಕ್ರಮ: ಡಿಸಿಎಂ ಲಕ್ಷ್ಮಣ ಸವದಿ

Update: 2020-11-01 12:40 GMT

ರಾಯಚೂರು, ನ. 1: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬದಲಾವಣೆ ಹೇಳಿಕೆ ಸಂಬಂಧಿಸಿದಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪಕ್ಷದ ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.

ರವಿವಾರ ನಗರದಲ್ಲಿ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ಬಳಿಕ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರು, ರಾಷ್ಟ್ರೀಯಾಧ್ಯಕ್ಷರು ಆ ಬಗ್ಗೆ ಸೂಕ್ತ ಸಂದರ್ಭದಲ್ಲಿ ಶಾಸಕ ಬಸನಗೌಡ ಪಾಟೀಲ್ ವಿರುದ್ಧ ಕ್ರಮಕೈಗೊಳ್ಳುತ್ತಾರೆ ಎಂದು ತಿಳಿಸಿದರು.

ಕಳೆದ ವರ್ಷದ ಬೆಳೆ ವಿಮೆಯ ಹಣ ರೈತರಿಗೆ ಸಿಗದೆ ಹೋಗಿದೆ. ಈ ಬಗ್ಗೆಯೂ ಪರಿಶೀಲಿಸಲಾಗುವುದು. ಭತ್ತ, ತೊಗರಿ, ಉದ್ದು ಹಾಗೂ ಉಂಡೆ ಕೊಬ್ಬರಿಗೆ ಬೆಂಬಲ ಬೆಲೆಯಲ್ಲಿ ಖರೀದಿಸಲು ಇಂದಿನಿಂದ ನೊಂದಣಿ ಕಾರ್ಯ ಆರಂಭಿಸಲಾಗುವುದು. ಡಿ.1ರಿಂದ ಖರೀದಿ ಕೇಂದ್ರ ಆರಂಭಿಸಲಾಗುವುದು ಎಂದರು.

ಹತ್ತಿ ಖರೀದಿ ಕೇಂದ್ರ ಆರಂಭಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗುವುದು. ಕೃಷ್ಣಾ ನದಿ ಪ್ರವಾಹಕ್ಕೆ ತುತ್ತಾಗುವ ಭೀತಿಯಲ್ಲಿರುವ ಗುರ್ಜಾಪುರ ಗ್ರಾಮ ಸ್ಥಳಾಂತರಕ್ಕೆ ಸಿದ್ಧತೆ ನಡೆದಿದೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News