ಅಪಪ್ರಚಾರಗಳಿಗೆ ವಾಸ್ತವತೆ ಅರಿತು ತಕ್ಕ ಉತ್ತರ ನೀಡಿ: ರಘುಪತಿ ಭಟ್
ಉಡುಪಿ, ನ.1: ಸರಕಾರದ ಜನ ಕಲ್ಯಾಣ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಗಳ ಬಗ್ಗೆ ಜನಸಾಮಾನ್ಯರಿಗೆ ತಿಳಿಸಿ ವಿಶ್ವಾಸ ಮೂಡಿಸುವ ಕಾರ್ಯ ಕರ್ತರೆ ಜನಪ್ರತಿನಿಧಿಗಳ ನಿಜವಾದ ರಾಯಭಾರಿಗಳು. ವಿರೋಧ ಪಕ್ಷದವರು ಮಾಡುವ ಅಪಪ್ರಚಾರಗಳಿಗೆ ಪಕ್ಷದ ಕಾರ್ಯಕರ್ತರು ವಾಸ್ತವತೆ ಅರಿತು ತಕ್ಕ ಪ್ರತ್ಯುತ್ತರ ನೀಡಬೇಕು ಎಂದು ಶಾಸಕ ರಘುಪತಿ ಭಟ್ ಹೇಳಿದ್ದಾರೆ.
ಕುಂಜಿಬೆಟ್ಟು ಶಾರದಾ ಕಲ್ಯಾಣ ಮಂಟಪದಲ್ಲಿ ರವಿವಾರ ನಡೆದ ಭಾರತೀಯ ಜನತಾ ಪಾರ್ಟಿ ಉಡುಪಿ ನಗರ ಇದರ ಪ್ರಥಮ ಕಾರ್ಯ ಕಾರಿಣಿ ಸಭೆಯಲ್ಲಿ ಭಾವಹಿಸಿ ಅವರು ಮಾತನಾಡುತಿದ್ದರು.
ಕಾರ್ಯಕ್ರಮವನ್ನು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್ ವಹಿಸಿದ್ದರು. ಸಚಿವ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಬಿಜೆಪಿ ಪ್ರಭಾರಿ, ಮೂಡುಬಿದ್ರೆ ಮೂಲ್ಕಿ ಶಾಸಕ ಉಮಾನಾಥ್ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಮಾತನಾಡಿದರು.
ಜಿಪಂ ಅಧ್ಯಕ್ಷ ದಿನಕರ್ ಬಾಬು, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಯಶ್ಪಾಲ್ ಸುವರ್ಣ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್.ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ, ತಾಪಂ ಉಪಾಧ್ಯಕ್ಷ ಶರತ್ ಬೈಲಕೆರೆ ಮೊದಲಾದವರು ಉಪಸ್ಥಿತರಿದ್ದರು.
ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್ ವಂದಿಸಿದರು. ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಮಣಿಪಾಲ ಹಾಗೂ ಜಿಲ್ಲಾ ವಕ್ತಾರ ಗಿರೀಶ್ ಅಂಚನ್ ಕಾರ್ಯಕ್ರಮ ನಿರೂಪಿಸಿದರು.