×
Ad

ದ.ಕ. ಜಿಲ್ಲೆ : 99 ಮಂದಿಗೆ ಸೋಂಕು, ಕೋವಿಡ್‌ಗೆ ಓರ್ವ ಬಲಿ

Update: 2020-11-01 20:24 IST

ಮಂಗಳೂರು, ನ.1: ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿನಿಂದ ಮತ್ತೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಈ ನಡುವೆ ರವಿವಾರ ಹೊಸದಾಗಿ 99 ಮಂದಿಗೆ ಸೋಂಕು ತಗುಲಿದ್ದು, 67 ಮಂದಿ ಕೊರೋನದಿಂದ ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿನ 30,341 ಸೋಂಕಿತರ ಪೈಕಿ 27,879 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ನಿಂದ 678 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 1,784 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯಲ್ಲಿ 10,713 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿದ್ದು, ಇವರಿಂದ 11,82,987 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News