ಯಡಿಯೂರಪ್ಪ ನೇತೃತ್ವದಲ್ಲಿಯೇ ಮುಂದಿನ‌ ಚುನಾವಣೆ: ಬಿ.ಸಿ.ಪಾಟೀಲ್

Update: 2020-11-02 10:52 GMT

ಹಾವೇರಿ : ಯಡಿಯೂರಪ್ಪ ನೇತೃತ್ವದಲ್ಲಿಯೇ ಮುಂದಿನ ಚುನಾವಣೆ ನಡೆಯಲಿದೆ. ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇನ್ನುಳಿದಿರುವ ಎರಡುವರೆ ವರ್ಷ ಯಾರೂ ಸಹ ಅಲುಗಾಡಿಸಲು ಸಾಧ್ಯವಿಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.

ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿ‌.ಸಿ.ಪಾಟೀಲ್, ಸುಮ್ಮನೆ ಪಕ್ಷದಲ್ಲಿ ಗೊಂದಲ ಸೃಷ್ಟಿಸುವುದು ತಿರುಕನ‌ಕನಸು ಹಗಲುಗನಸು ಕಾಣುವುದನ್ನು ಕೆಲವರು ಮಾಡುತ್ತಿದ್ದು, ಅದೆಂದೂ ಸಾಧ್ಯವಿಲ್ಲ. ಯಡಿಯೂರಪ್ಪ ನೇತೃತ್ವದಲ್ಲಿಯೇ ಸ್ಥಳೀಯ ಸಂಸ್ಥೆ ಚುನಾವಣೆಯಿಂದ ಹಿಡಿದು ಎಲ್ಲಾ ಚುನಾವಣೆಗಳು ನಡೆಯಲಿವೆ ಎಂದರು‌.

ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದರಿಂದ ಸಿದ್ದರಾಮಯ್ಯ ವಿಪಕ್ಷ ನಾಯಕರಾಗಲು ಸಾಧ್ಯವಾಯಿತು. ಎಚ್.ಡಿ.ಕುಮಾರಸ್ವಾಮಿ ಜೊತೆ ಮೈತ್ರಿ ಸರ್ಕಾರದಲ್ಲಿಯೇ ಇದ್ದಿದ್ದರೆ ಸಿದ್ದರಾಮಯ್ಯ ಬಾಡಿಗೆ ಮನೆಯಲ್ಲಿದ್ದಂತಿರಬೇಕಾಗಿತ್ತು ಎಂದರು. ಮನುಷ್ಯರನ್ನು ನಾಯಿಗೆ ಹೋಲಿಸು ವುದು, ಬಂಡೆಗೆ ಹೋಲಿಸುವುದು, ಹುಲಿ, ಟಗರು ಎನ್ನುವುದು ಸಂಸ್ಕೃತಿಯಿಲ್ಲದ್ದು. ಸಿದ್ದರಾಮಯ್ಯ ಈ ರೀತಿ ಪದಗಳನ್ನು ಬಳುಸುವುದು ಸಂಸ್ಕೃತಿಗೆ ತಕ್ಕದ್ದಲ್ಲ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಸಿದ್ದರಾಮಯ್ಯಗೆ ತನ್ನ ವಿರೋಧ ಪಕ್ಷದ ಸ್ಥಾನ ಎಲ್ಲಿ ಅಲ್ಲಾಡಿ ಹೋಗುತ್ತದೆಯೋ ಎಂಬ ಭಯವಿದೆ‌ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News