ನಟಿ, ಮಾಜಿ ಸಚಿವೆ ಉಮಾಶ್ರೀ ಮನೆಯಲ್ಲಿ ಕಳವು

Update: 2020-11-02 12:39 GMT

ಬಾಗಲಕೋಟೆ, ನ. 2: ಹಿರಿಯ ಸಿನೆಮಾ ನಟಿ, ಮಾಜಿ ಸಚಿವೆ ಉಮಾಶ್ರೀ ಅವರ ಮನೆಯಲ್ಲಿ ಕಳ್ಳತನ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ತೇರದಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬನಹಟ್ಟಿ ತಾಲೂಕಿನ ರಬಕವಿಯ ವಿದ್ಯಾನಗರದಲ್ಲಿರುವ ಉಮಾಶ್ರೀ ಅವರ ಮನೆಯಲ್ಲಿ ಕಳ್ಳತನವಾಗಿದ್ದು, ಮನೆಯ ಬಾಗಿಲು ಮುರಿದಿರುವ ದುಷ್ಕರ್ಮಿಗಳು ನಗದು, ಚಿನ್ನಾಭರಣ ಕಳ್ಳತನ ಮಾಡಿದ್ದಾರೆ ಎನ್ನಲಾಗಿದೆ.

ಬೆಂಗಳೂರಿನಲ್ಲಿ ಉಮಾಶ್ರೀ ವಾಸ ಮಾಡುತ್ತಿರುವುದನ್ನೇ ಗುರಿಯಾಗಿಸಿಕೊಂಡು ದುಷ್ಕರ್ಮಿಗಳು ಈ ಕೃತ್ಯವೆಸಗಿದ್ದಾರೆ ಎಂದು ಹೇಳಲಾಗುತ್ತಿದ್ದು, ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು, ಪರಿಶೀಲನೆ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News