ನ. 5ಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಉಡುಪಿಗೆ
Update: 2020-11-02 22:00 IST
ಉಡುಪಿ, ನ. 2: ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಅವರು ನ.5ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಸಂಜೆ 5 ಗಂಟೆಗೆ ಜಿಲ್ಲೆಯ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಶಿವಮೊಗ್ಗಕ್ಕೆ ತೆರಳಲಿರುವರು.
ಜಗದೀಶ್ ಶೆಟ್ಟರ್ ಉಡುಪಿಗೆ: ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆ ಸಚಿವ ಜಗದೀಶ ಶೆಟ್ಟರ್, ನ.6ರಂದು ಉಡುಪಿ ಜಿ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು.
ಅಂದು ಅಪರಾಹ್ನ 12 ಕ್ಕೆ ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೈಗಾರಿಕಾ ಅಧಿಕಾರಿಗಳು ಹಾಗೂ ಕೈಗಾರಿಕೋದ್ಯಮಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಂಗಳೂರಿಗೆ ತೆರಳುವರು.