×
Ad

ವಿಜಯ್ ಮಲ್ಯ ಗಡಿಪಾರಿಗೆ ಸಂಬಂಧಿಸಿದ ರಹಸ್ಯ ಪ್ರಕ್ರಿಯೆ ಸ್ಥಿತಿ ವರದಿ ಸಲ್ಲಿಸಲು ಕೇಂದ್ರಕ್ಕೆ ಸೂಚನೆ

Update: 2020-11-02 22:56 IST

ಹೊಸದಿಲ್ಲಿ, ನ.2: ದೇಶಭ್ರಷ್ಟ ಉದ್ಯಮಿ ವಿಜಯ್ ಮಲ್ಯರನ್ನು ಭಾರತಕ್ಕೆ ಗಡಿಪಾರುಗೊಳಿಸುವುದಕ್ಕೆ ಸಂಬಂಧಿಸಿ ಇಂಗ್ಲೆಂಡ್‌ನಲ್ಲಿ ಬಾಕಿಯಿರುವ ರಹಸ್ಯ ಕಾನೂನು ಪ್ರಕ್ರಿಯೆಯ ಕುರಿತು 6 ವಾರದೊಳಗೆ ಸ್ಥಿತಿಗತಿ ವರದಿ ಸಲ್ಲಿಸುವಂತೆ ಸೋಮವಾರ ಕೇಂದ್ರ ಸರಕಾರಕ್ಕೆ ಸುಪ್ರೀಂಕೋರ್ಟ್ ಸೂಚಿಸಿದೆ.

ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ರಹಸ್ಯ ಕಾನೂನು ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ವಿಜಯ್ ಮಲ್ಯರನ್ನು ಭಾರತಕ್ಕೆ ಗಡಿಪಾರು ಮಾಡುವಂತಿಲ್ಲ. ಈ ಕಾನೂನು ಪ್ರಕ್ರಿಯೆಯಲ್ಲಿ ತಾನು ಕಕ್ಷೀದಾರನಲ್ಲದ ಕಾರಣ ಈ ರಹಸ್ಯ ನ್ಯಾಯಾಂಗ ಪ್ರಕ್ರಿಯೆಯ ಬಗ್ಗೆ ಹೆಚ್ಚಿನ ಮಾಹಿತಿಯಿಲ್ಲ ಎಂದು ಅಕ್ಟೋಬರ್ 5ರಂದು ಕೇಂದ್ರ ಸರಕಾರ ಸುಪ್ರೀಂಕೋರ್ಟ್‌ಗೆ ತಿಳಿಸಿತ್ತು. ಈ ರಹಸ್ಯ ಪ್ರಕ್ರಿಯೆಯ ಸ್ಥಿತಿಗತಿ ವರದಿಯನ್ನು ಸಲ್ಲಿಸುವಂತೆ ಕೇಂದ್ರಕ್ಕೆ ಸೂಚಿಸಿದ ನ್ಯಾಯಪೀಠ, ವಿಚಾರಣೆಯನ್ನು ಮುಂದಿನ ಜನವರಿಗೆ ಮುಂದೂಡಿದೆ.

 ಈ ಮಧ್ಯೆ, ನ್ಯಾಯಾಲಯದ ಆದೇಶ ಉಲ್ಲಂಘಿಸಿ 40 ಮಿಲಿಯನ್ ಅಮೆರಿಕನ್ ಡಾಲರ್ ಮೊತ್ತವನ್ನು ತನ್ನ ಮಕ್ಕಳ ಖಾತೆಗೆ ವರ್ಗಾಯಿಸಿದ್ದ ಪ್ರಕರಣದಲ್ಲಿ ವಿಜಯ್ ಮಲ್ಯ ದೋಷಿ ಎಂದು ಹೇಳಿದ್ದ ಸುಪ್ರೀಂಕೋರ್ಟ್, ಅಕ್ಟೋಬರ್ 5ರೊಳಗೆ ತನ್ನೆದುರು ಹಾಜರಾಗುವಂತೆ ಸೂಚಿಸಿತ್ತು. ಈ ಪ್ರಕರಣದಿಂದ ಮಲ್ಯರನ್ನು ದೋಷಮುಕ್ತಗೊಳಿಸಬೇಕು ಎಂದು ಅವರ ವಕೀಲರು ಮಾಡಿಕೊಂಡಿದ್ದ ಮನವಿಯನ್ನೂ ಸುಪ್ರೀಂಕೋರ್ಟ್ ಸೋಮವಾರ ತಳ್ಳಿಹಾಕಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News